ನವದೆಹಲಿ: ಚೀನಾ ಮೂಲದ ಎಲೆಕ್ಟ್ರಾನಿಕ್ಸ್ ದೈತ್ಯ ಲೆನೊವೊ ಕಂಪನಿಯ ಬೆಂಗಳೂರು, ಗುರುಗ್ರಾಮ್, ಮುಂಬೈ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ತೆರಿಗೆ ವಂಚನೆಯ ದೂರಿನ ಆಧಾರ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ನಡೆಯುತ್ತಿದೆ. ನಂತರ ವಿವರ ನೀಡುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಮಧ್ಯೆ ಲೆನೊವೊ ವಕ್ತಾರರು ಹೇಳಿಕೆ ನೀಡಿದ್ದು “ಜವಾಬ್ದಾರಿಯುತ ಕಾರ್ಪೊರೇಟ್ ಕಂಪನಿಯಾಗಿ ನಾವು ನಮ್ಮ ಪ್ರತಿ ವ್ಯವಹಾರಗಳಲ್ಲಿ ಎಲ್ಲಾ ಕಾನೂನುಗಳು, ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ ಎಂದು ಹೇಳಿದ್ದಾರೆ.
ಅಧಿಕಾರಿಗಳಿಗೆ ವಿವರ ಒದಗಿಸಿದ್ದೇವೆ. ಮತ್ತು ತನಿಖೆಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಹೈಯರ್ ಕಂಪನಿ ಮೇಲೆ ತೆರಿಗೆ ಇಲಾಖೆ ದಾಳಿ ನಡೆಸಿತ್ತು.