News Kannada
Friday, February 23 2024
ದೆಹಲಿ

ಇನ್ಮುಂದೆ ಸಿಮ್‌ ಖರೀದಿ ಮಾಡಬೇಕಂದ್ರೆ ಇಷ್ಟೆಲ್ಲ ರೂಲ್ಸ್‌ ಫಾಲೋ ಮಾಡ್ಲೇಬೇಕು

If you want to buy a SIM, you will have to follow these rules
Photo Credit : Pixabay

ನವದೆಹಲಿ: ದೇಶದಲ್ಲಿ ಯಾರ್ಯಾರದೋ ಹೆಸರಿನಲ್ಲಿ ಸಿಮ್‌ ಕಾರ್ಡ್‌ ಖರೀದಿಸಿ ಭಯೋತ್ಪಾದಕ ಚಟುವಟಿಕೆ, ಸೈಬರ್‌ ಕ್ರೈಂಗೆ ಬಳಸುವ ದೇಶವಿರೋಧಿ ಕೃತ್ಯಗಳು ಹೆಚ್ಚುತ್ತಿದೆ. ಇದಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಕಠಿಣ ನಿರ್ಧಾರವೊಂದನ್ನು ತಂದಿದೆ.

ಸಿಮ್‌ ಕಾರ್ಡ್‌ ಖರೀದಿ ಮಾಡಲು ಡಿ.1 ರಿಂದ ಕೆಲ ಕಠಿಣ ನಿಯಮಗಳನ್ನು ಪಾಲಿಸಬೇಕು. ಗ್ರಾಹಕರು ಮಾತ್ರವಲ್ಲ ಸಿಮ್‌ ವಿತರಿಸುವ ಡೀಲರ್‌ಗಳು ಸಹ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ನಿಯಮ ಪಾಲಿಸದೇ ಉಲ್ಲಂಘನೆ ಮಾಡಿದರೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಗಂಭೀರ ಪ್ರಕರಣವಾದಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

ವ್ಯಾಪಾರಸ್ಥರು/ ಕಂಪನಿಗಳಿಗೆ ಮಾತ್ರ ಸಿಮ್ ಕಾರ್ಡ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಸಾಮಾನ್ಯ ಬಳಕೆದಾರರು ಒಂದು ಗುರುತಿನಿಂದ ಗರಿಷ್ಠ 9 ಸಿಮ್‌ಗಳನ್ನು ಮಾತ್ರ ಪಡೆಯಬಹುದು. ಸಿಮ್‌ ಕಾರ್ಡ್‌ ರದ್ದು/ ನಿಷ್ಕ್ರಿಯಗೊಳಿಸಿದ 90 ದಿನಗಳ ನಂತರ ಆ ಸಂಖ್ಯೆಯನ್ನು ಬೇರೆ ಗ್ರಾಹಕರಿಗೆ ನೀಡಲಾಗುತ್ತದೆ. ಸಿಮ್ ಕಾರ್ಡ್‌ಗಳನ್ನು ಖರೀದಿಸುವ ಗ್ರಾಹಕರು ತಮ್ಮ ಆಧಾರ್ ಮತ್ತು ಜನಸಂಖ್ಯಾ ಡೇಟಾವನ್ನು ಸಲ್ಲಿಸಬೇಕಾಗುತ್ತದೆ. ನೋಂದಾಯಿಸದ ಡೀಲರ್‌ಗಳ ಮೂಲಕ ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಿದರೆ ಹೊಸ ನಿಯಮಗಳ ಪ್ರಕಾರ ಟೆಲಿಕಾಂ ಆಪರೇಟರ್‌ಗಳಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಎಲ್ಲಾ ಸಿಮ್‌ ಕಾರ್ಡ್‌ ಡೀಲರ್‌ಗಳು ಕಡ್ಡಾಯವಾಗಿ ನವೆಂಬರ್ ಅಂತ್ಯದೊಳಗೆ ದಾಖಲೆಗಳನ್ನು ಸಲ್ಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು. ಸಿಮ್‌ ಕಾರ್ಡ್‌ ಡೀಲರ್‌ಗಳು ಅಥವಾ ಚಿಲ್ಲರೆ ವ್ಯಾಪಾರಿಯು ನೋಂದಣಿಗಾಗಿ ಕಾರ್ಪೊರೇಟ್ ಗುರುತಿನ ಸಂಖ್ಯೆ, ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಗುರುತಿನ ಸಂಖ್ಯೆ ಅಥವಾ ವ್ಯಾಪಾರ ಪರವಾನಗಿ, ಆಧಾರ್ ಅಥವಾ ಪಾಸ್‌ಪೋರ್ಟ್, ಪಾನ್‌, ಸರಕು ಮತ್ತು ಸೇವಾ ತೆರಿಗೆ ನೋಂದಣಿ ಪ್ರಮಾಣಪತ್ರ ಇತ್ಯಾದಿಗಳನ್ನು ಒದಗಿಸಬೇಕಾಗುತ್ತದೆ.

ಸಿಮ್‌ ಡೀಲರ್‌ಗಳು ನಕಲಿ ದಾಖಲೆಗಳನ್ನು ಸಲ್ಲಿಸಿದರೆ, ಟೆಲಿಕಾಂ ಆಪರೇಟರ್‌ಗಳು ಅವರ ಐಡಿಯನ್ನು ನಿರ್ಬಂಧಿಸಬೇಕು. ಅಷ್ಟೇ ಅಲ್ಲದೇ ಸಿಮ್‌ ಡೀಲರ್‌ನಿಂದ ಯಾರಿಗೆಲ್ಲ ಸಿಮ್‌ ಕಾರ್ಡ್‌ ವಿತರಣೆಯಾಗಿದೆಯೋ ಆ ಎಲ್ಲಾ ಗ್ರಾಹಕರು ಸಿಮ್‌ ಪಡೆಯಲು ನೀಡಿದ ದಾಖಲೆಗಳನ್ನು ಮರು ಪರಿಶೀಲಿಸಬೇಕಾಗುತ್ತದೆ.

ನವೆಂಬರ್ 30 ರೊಳಗೆ ನೋಂದಾಯಿಸದೇ ಉಳಿಯುವ ಸಿಮ್ ಕಾರ್ಡ್ ಮಾರಾಟಗಾರರು 10 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾಗುತ್ತದೆ ಮತ್ತು ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು