News Kannada
Monday, February 26 2024
ದೆಹಲಿ

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,216 ಕೋವಿಡ್ 19 ಸೋಂಕು ಪ್ರಕರಣ ದೃಢ

New Delhi: India reports 16,866 new COVID-19 cases, 41 deaths
Photo Credit : News Kannada

ದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 13,216 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 24 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,840ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜೂನ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಒಂದೇ ದಿನದಲ್ಲಿ ದೇಶದಲ್ಲಿ 5,045 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಇದೀಗ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 68,108ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.

24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 8,148 ಮಂದಿ ಗುಣಮುಖರಾಗಿದ್ದು, ದೇಶಾದ್ಯಂತ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,26,90,845ಕ್ಕೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.63ರಷ್ಟಿದೆ.

ದೇಶದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.2.73ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.47ರಷ್ಟಿದೆ. ಭಾರತದಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 196 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು