ದೆಹಲಿ: ದೆಹಲಿಯಲ್ಲಿ ಶಂಕಿತ ಐಸಿಸ್ ಉಗ್ರ ಶಹನ್ವಾಜ್ ಅಲಿಯಾಸ್ ಶಫಿಯನ್ನು ಬಂಧಿಸಲಾಗಿದೆ. ದೆಹಲಿಯ ವಿಶೇಷ ಪೊಲೀಸ್ ತಂಡವು ಶಫಿಯನ್ನು ಬಂಧಿಸಿದೆ, ಉಗ್ರರ ಬಗ್ಗೆ ಸುಳಿವು ಕೊಟ್ಟವರಿಗೆ ಎನ್‌ಐಎ 3 ಲಕ್ಷ ರೂ ಬಹುಮಾನವನ್ನು ಘೋಷಿಸಿತ್ತು. ಪೊಲೀಸರ ಪ್ರಕಾರ, ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನ್ವಾಜ್ ಮೂಲತಃ ದೆಹಲಿಯವರು. ಪುಣೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ವಾಸವಾಗಿದ್ದರು. ಸದ್ಯ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.
ಮಹಾರಾಷ್ಟ್ರ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಐಸಿಸ್ ಉಗ್ರರು ದಾಳಿಗೆ ಸಂಚು ರೂಪಿಸಿರುವ ಕುರಿತು ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ, ಕಳೆದ ತಿಂಗಳಷ್ಟೇ ಪುಣೆಯಲ್ಲಿ ದಾಳಿ ನಡೆಸಿ ಹಲವು ಶಂಕಿತ ಉಗ್ರರನ್ನು ಬಂಧಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಅಡಗಿ ಕುಳಿತಿದ್ದ ಶಾಹ್‌ನವಾಜ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೆಹಲಿ ನಿವಾಸಿಯಾದ ಶಾಹ್‌ನವಾಜ್ (32) ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದ. ಆದರೆ, ಐಸಿಸ್‌ನಿಂದ ಪ್ರೇರೇಪಣೆಗೊಂಡು ಹಲವು ಶಂಕಿತರ ಜತೆಗೂಡಿ ಉಗ್ರ ಕೃತ್ಯಗಳಲ್ಲಿ ತೊಡಗಿದ್ದ ಎಂದು ತಿಳಿದುಬಂದಿದೆ. ರಿಜ್ವಾನ್ ಅಬ್ದುಲ್ ಹಾಜಿ ಅಲಿ, ಅಬ್ದುಲ್ಲಾ ಫಯಾಜ್ ಶೇಖ್ ಹಾಗೂ ಲಿಯಾಕತ್ ಖಾನ್ ಎಂಬುವವರೊಂದಿಗೆ ಎನ್‌ಐಎ ವಾಂಟೆಡ್ ಲಿಸ್ಟ್‌ನಲ್ಲಿ ಈತನೂ ಇದ್ದಾನೆ. ಇವರ ಬಗ್ಗೆ ಮಾಹಿತಿ ನೀಡಿದವರಿಗೆ ಎನ್‌ಐಎ 3 ಲಕ್ಷ ರೂ. ಬಹುಮಾನ ಘೋಷಿಸಿದೆ. ಸಧ್ಯ ಶಂಕಿತ ಐಸಿಸ್ ಉಗ್ರ ಶಹನ್ವಾಜ್ ಅಲಿಯಾಸ್ ಶಫಿ ಈಗ ಪೊಲೀಸ್ ಕೈಯಲ್ಲಿ ಲಾಕ್ ಆಗಿದ್ದಾನೆ.