News Kannada
Friday, February 23 2024
ದೆಹಲಿ

ನೇಪಾಳದಲ್ಲಿ ಮೈಸೂರಿನ ರಾಜ-ರಾಣಿ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಈ ವರ್ಷ ನೇಪಾಳದ ಪಶುಪತಿ ದೇವಾಲಯದಲ್ಲಿ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್‌ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.
Photo Credit : News Kannada

ನೇಪಾಳ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಈ ವರ್ಷ ನೇಪಾಳದ ಪಶುಪತಿ ದೇವಾಲಯದಲ್ಲಿ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್‌ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್ ಜೊತೆಗೆ ಮಹಾರಾಣಿ ತೃಷಿಕಾ ಒಡೆಯರ್ ಭಾಗಿಯಾಗಿ ಕನ್ನಡ ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಪ್ರತಿಯೊಬ್ಬರೂ ಕೈ ಜೋಡಿಸಬೇಕೆಂದು ಕರೆ ನೀಡಿದ್ದರು.

ನೆರೆ ರಾಷ್ಟ್ರವಾದ ನೇಪಾಳದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ನಡೆದಿರೋದರಿಂದ ಮಹಾರಾಜ ದಂಪತಿ ನೇಪಾಳ ದರ್ಶನ ಕೂಡ ಮಾಡಿ ಬಂದಿದ್ದಾರೆ. ನೇಪಾಳದಲ್ಲಿ ಒಂದು ದಿನ ಎಂದು ಪೋಸ್ಟ್ ಹಾಕಿ, ಪ್ರಸಿದ್ಧ ತಾಣಗಳಿಗೆ ಭೇಟಿ ನೀಡಿದ್ದಾರೆ.

ಕಾರ್ಯಕ್ರಮದ ಬಳಿಕ ರಾಜ-ರಾಣಿ ನೇಪಾಳದ ಪ್ರವಾಸಿ ತಾಣಗಳನ್ನು ಸಾಮಾನ್ಯ ಜನರಂತೆ ಬೀದಿ ಬೀದಿಯಲ್ಲಿ ಸುತ್ತುತ್ತಾ, ಎಂಜಾಯ್ ಮಾಡುತಿದ್ದಾರೆ. ರಾಜಕುಮಾರಿ ತ್ರಿಷಿಕಾದೇವಿ ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮೈಸೂರಿನ ಒಡೆಯ ದಂಪತಿ ಸಿಂಪಲ್ ಲುಕ್ ಮತ್ತು ಸರಳ ನಡೆಗೆ ಮನಸೋತಿರುವ ಅಭಿಮಾನಿಗಳು ನಿಮ್ಮ ಸರಳತೆಗೆ ಸಲಾಂ ಎಂದಿದ್ದಾರೆ. ಅಲ್ಲದೇ ನಮ್ಮ ಮಾಡರ್ನ್ ಯುಗದ ಮಹಾರಾಜ ಮತ್ತು ಮಹಾರಾಣಿ ಎಂದು ಕಾಮೆಂಟ್ ಮಾಡಿದ್ದಾರೆ.

https://www.instagram.com/p/C0MEKjYLzWL/?hl=en

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು