News Karnataka Kannada
Wednesday, April 24 2024
Cricket
ದೆಹಲಿ

ಹೊಸ ಸಂಸತ್‌ ಕಟ್ಟಡ ಭಾರತದ ಪ್ರಗತಿಯ ಸಂಕೇತ- ಪ್ರಧಾನಿ ಮೋದಿ

New Parliament building is a sign of India's progress PM Modi
Photo Credit : IANS

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನೂತನ ಸಂಸತ್ ಭವನವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸಂಸತ್‌ ಕಟ್ಟಡವು ಭಾರತದ ಪ್ರಗತಿಯ ಪ್ರತೀಕವಾಗಿದ್ದು, ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಹೇಳಿದರು.

ಈ ಐಕಾನಿಕ್ ಕಟ್ಟಡವು ಸಬಲೀಕರಣದ ತೊಟ್ಟಿಲು ಆಗಲಿ. ಕನಸುಗಳನ್ನು ಪೋಷಿಸಿ ನೀರೆರದು ಅದನ್ನು ಪ್ರಗತಿಯ ಉತ್ತುಂಗಕ್ಕೆ ಕೊಂಡೊಯ್ಯಲಿ ಎಂದು ಉಲ್ಲೇಖಿಸಿದ್ದು, ಹೊಸ ಸಂಸತ್ ಭವನದ ಉದ್ಘಾಟನೆಯ ಛಾಯಾಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮೋದಿ ಅವರು ಸಂಸತ್ತಿನ ಆವರಣದಲ್ಲಿ ‘ಪೂಜೆ’ ಮತ್ತು ‘ಹವನ’ ನೆರವೇರಿಸಿದ ನಂತರ ಹೊಸ ಸಂಸತ್ ಭವನ ಉದ್ಘಾಟಿಸಿದರು. ನೂತನ ಕಟ್ಟಡದಲ್ಲಿ ಲೋಕಸಭೆಯ ಸ್ಪೀಕರ್ ಪೀಠದ ಬಳಿ ಐತಿಹಾಸಿಕ ‘ಸೆಂಗೊಲ್’ ಅನ್ನು ಸ್ಥಾಪಿಸಿದರು. ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಹಲವಾರು ಸಚಿವರು ಮತ್ತು ಗಣ್ಯರು ಉಪಸ್ಥಿತರಿದ್ದರು. ಕಾಂಗ್ರೆಸ್ ಸೇರಿದಂತೆ 20 ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿದವು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಇದು ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿಗೆ ಮಾಡಿದ ಅವಮಾನ ಎಂದು ಹೇಳಿದ್ದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು