ನವದೆಹಲಿ: ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಸಿರು ನಿಶಾನೆ ತೋರಲಿದ್ದಾರೆ.
ಈ ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಗೆ ಸಂಪರ್ಕ ಕಲ್ಪಿಸುತ್ತವೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.
ಉದಯಪುರ – ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ತಿರುನಲ್ವೇಲಿ-ಮಧುರೈ – ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್, ಹೈದರಾಬಾದ್ – ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ವಿಜಯವಾಡ – ಚೆನ್ನೈ (ರೇಣಿಗುಂಟಾ ಮೂಲಕ) ವಂದೇ ಭಾರತ್ ಎಕ್ಸ್‌ಪ್ರೆಸ್, ಪಾಟ್ನಾ – ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ಎಕ್ಸ್‌ಪ್ರೆಸ್, ಕಾಸರಗೋಡು – ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್, ರೂರ್ಕೆಲಾ – ಭುವನೇಶ್ವರ್ – ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್, ರಾಂಚಿ – ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜಾಮ್‌ನಗರ-ಅಹಮದಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಈ ವಂದೇ ಭಾರತ್ ರೈಲುಗಳು ತಮ್ಮ ಕಾರ್ಯಾಚರಣೆಯ ಮಾರ್ಗಗಳಲ್ಲಿ ಅತ್ಯಂತ ವೇಗದ ರೈಲು ಆಗಿರುತ್ತವೆ ಮತ್ತು ಪ್ರಯಾಣಿಕರ ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ.