News Kannada
Saturday, March 02 2024
ದೆಹಲಿ

ಪ್ರಧಾನಿ ಮೋದಿ ಜನ್ಮದಿನದ ಸಂಭ್ರಮ: ರಾಷ್ಟ್ರಪತಿ, ದೇವೇಗೌಡ ಸೇರಿ ಗಣ್ಯರಿಂದ ಶುಭಾಶಯ

President, HD Deve Gowda greet PM Modi on his birthday
Photo Credit : News Kannada

ನವದೆಹಲಿ: ಪ್ರಧಾನಿ ಮೋದಿಯವರು 73ನೇ ಜನ್ಮದಿನದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಶುಭಾಶಯ ಕೋರಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ ‘ಅಮೃತ ಕಾಲ’ದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ದಾರಿ ಮಾಡಿಕೊಡಬೇಕೆಂದು ಬಯಸುತ್ತೇನೆ. ನೀವು ಯಾವಾಗಲೂ ಆರೋಗ್ಯವಂತರಾಗಿ ಮತ್ತು ಸಂತೋಷದಿಂದಿರಿ. ನಿಮ್ಮ ಅತ್ಯುನ್ನತ ನಾಯಕತ್ವದಿಂದ ದೇಶವಾಸಿಗಳಿಗೆ ಪ್ರಯೋಜನವಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹೆಚ್’ಡಿ.ದೇವೇಗೌಡ ಅವರು ಪೋಸ್ಟ್ ಮಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 73 ನೇ ಹುಟ್ಟುಹಬ್ಬಕ್ಕೆ ನನ್ನ ಕಡೆಯಿಂದ ಜನ್ಮದಿನದ ಹಾರ್ದಿಕ ಶುಭಾಶಯಗಳು. ಸರ್ವಶಕ್ತನಾದ ದೇವರು ರಾಷ್ಟ್ರದ ಸೇವೆ ಮಾಡಲು ಅವರಿಗೆ ಉತ್ತಮ ಆರೋಗ್ಯವನ್ನು ನೀಡಲಿ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರೂ ಕೂಡ ಮೋದಿಯವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಎಕ್ಸ್‌ ನಲ್ಲಿ , ದಣಿವರಿಯದ ವ್ಯಕ್ತಿ, ನಿಸ್ವಾರ್ಥ ಸೇವೆಯ ಮೂಲಕ ಕೋಟ್ಯಂತರ ಜನರ ಜೀವನದಲ್ಲಿ ಸಮೃದ್ಧಿ ಹಾಗೂ ವಿಶ್ವಾಸವನ್ನು ತಂದೆ ದೇಶದ ಜನಪ್ರಿಯ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಎಂದು ಬರೆದಿದ್ದಾರೆ.

ರಕ್ಷಣಾ ಸಚಿವ ರಾಜ್‌ ನಾಥ್‌ ಸಿಂಗ್‌ ಅವರು ಎಕ್ಸ್‌ ನಲ್ಲಿ ಪ್ರಧಾನಿ ಮೋದಿ ಅವರಿಗೆ ಎಕ್ಸ್‌ ಖಾತೆಯಲ್ಲಿ ವಿಶ್‌ ಮಾಡಿದ್ದು, ಭಾರತದ ಯಶಸ್ವಿ ಮತ್ತು ಕಟ್ಟಪಟ್ಟು ದುಡಿಯುವ ಪ್ರಧಾನಿ ಮೋದಿಗೆ ಹುಟ್ಟು ಹಬ್ಬದ ಶುಭಾಶಯಗಳು, ಮೋದಿಯವರು ಭಾರತಕ್ಕೆ ಹೊಸ ಗುರುತನ್ನು ನೀಡಿದ್ದು, ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಅದರ ಘನತೆಯನ್ನು ಹೆಚ್ಚಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪ್ರಧಾನಿ ಮೋದಿಗೆ ಶುಭಾಶಯ ಕೋರಿದ್ದಾರೆ, ವಿಶ್ವದ ಜನಪ್ರಿಯ ನಾಯಕ ಮೋದಿ, ನೀವು ಭಾರತೀಯ ಸಂಸ್ಕೃತಿಯ ಜಾಗತಿಕ ಪ್ರತಿಷ್ಠೆ, ಜನರ ಬಹು ಆಯಾಮದ ಅಭಿವೃದ್ಧಿ ಮತ್ತು ರಾಷ್ಟ್ರದ ಸಾರ್ವತ್ರಿಕ ಪ್ರಗತಿಗೆ ಒಳ್ಳೆಯ ರೂಪವನ್ನು ನೀಡಿದ್ದೀರಿ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು