ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಚಂದ್ರಯಾನ 3 ಯಶಸ್ಸು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಇತರ ಸಾಧನೆಗಳ ಕುರಿತು ಚರ್ಚೆ ಆರಂಭಿಸಿದ ಸಿಂಗ್ ದೇಶದ ಗಡಿ ಭದ್ರತೆ ಮತ್ತು ರಾಷ್ಟ್ರದ ಗಡಿಯನ್ನು ರಕ್ಷಿಸುವಲ್ಲಿ ವಿಜ್ಞಾನದ ಪಾತ್ರವನ್ನು ಉಲ್ಲೇಖಿಸಿದರು.
ಈ ವೇಳೆ ಪ್ರಶ್ನೆ ಮಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಅವರು ಚೀನಾದೊಂದಿಗಿನ ಗಡಿ ಬಿಕ್ಕಟ್ಟನ್ನು ಉಲ್ಲೇಖಿಸಿ ಚರ್ಚೆ ನಡೆಸಲು ಧೈರ್ಯವಿದೆಯೇ ಎಂದು ಸವಾಲು ಹಾಕಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಂಗ್ ನನಗೆ ಪೂರ್ಣ ಧೈರ್ಯವಿದೆ. ನಾನು ಚರ್ಚೆಗೆ ಸಿದ್ಧ. ಚರ್ಚಿಸುವ ವಿಶ್ವಾಸವೂ ಇದೆ ಎಂದರು.