News Kannada
Friday, December 02 2022

ಗೋವಾ

ಇಂದು ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ

Photo Credit : Twitter

ಗೋವಾ: ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ಸೋಮವಾರ ಬೆಳಗ್ಗೆ 11 ಗಂಟೆಗೆ ಪಣಜಿ ಸಮೀಪದ ಬಾಂಬೋಲಿಂ ಶಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಮೂರು ಬಾರಿಯ ಶಾಸಕ, 48 ವರ್ಷದ ಪ್ರಮೋದ್ ಸಾವಂತ್ ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗುತ್ತಿದ್ದಾರೆ.ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ ಪ್ರಮೋದ್ ಸಾವಂತ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಮಾರ್ಚ್ 10ರಂದು ಫಲಿತಾಂಶ ಪ್ರಕಟಗೊಂಡಿತ್ತು. ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು.

ಗೋವಾದಲ್ಲಿ ಸರ್ಕಾರ ರಚನೆ ಮಾಡಲು ಬಹುಮತಕ್ಕೆ ಬಿಜೆಪಿಗೆ 1 ಸ್ಥಾನದ ಕೊರತೆ ಇತ್ತು. ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೂವರು ಪಕ್ಷೇತರ ಶಾಸಕರು, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಬೆಂಬಲಿಸಿದ್ದು, ಅವರ ನೆರವಿನಿಂದ ಬಿಜೆಪಿ ಸರ್ಕಾರ ರಚನೆ ಮಾಡುತ್ತಿದೆ.

See also  ಪಣಜಿ: ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು, ನಟಿ ಸೇರಿದಂತೆ ಮೂವರ ರಕ್ಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು