ಗುಜರಾತ್ ನ ಪಂಚಮಹಲ್ ಜಿಲ್ಲೆಯಲ್ಲಿ ಗೋಘಾಂಬಾದಲ್ಲಿರುವ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ಇಬ್ಬರು ಮೃತಪಟ್ಟಿದ್ದು, 14 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗುರುವಾರ ಬೆಳಗ್ಗೆ ಫ್ಯಾಕ್ಟರಿಯಿಂದ ಸ್ಫೋಟಕ ಶಬ್ದ ಕೇಳಿ ಬಂದಿದೆ. ಇಡೀ ಕಾರ್ಖಾನೆ ದಟ್ಟವಾದ ಹೊಗೆಯಿಂದ ಆವರಿಸಿಕೊಂಡಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಕಳೆದ 30 ವರ್ಷಗಳಿಂದ ಫ್ಲೋರಿನ್ ರಾಸಾಯನಿಕ ಉತ್ಪಾದನೆ ಮಾಡುತ್ತಿರುವ ಕಂಪನಿ ಇದಾಗಿದೆ. ಈವರೆಗೆ ಸ್ಫೋಟಕ್ಕೆ ಯಾವುದೇ ಕಾರಣ ತಿಳಿದುಬಂದಿಲ್ಲ