News Kannada
Sunday, March 03 2024
ಗುಜರಾತ್

ಗುಜರಾತ್‌: ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ

Fire breaks out in Gujarat train
Photo Credit : News Kannada

ಗುಜರಾತ್: ಗುಜರಾತ್‌ನ ವಲ್ಸಾದ್ ರೈಲು ನಿಲ್ದಾಣದಿಂದ ಸೂರತ್‌ ಕಡೆಗೆ ಹೊರಟ ಶ್ರೀ ಗಂಗಾನಗರ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಗುಜರಾತ್‌ನ ವಲ್ಸಾದ್ ರೈಲು ನಿಲ್ದಾಣದಿಂದ ಹೊರಟಿದ್ದು ಎಕ್ಸ್‌ಪ್ರೆಸ್ ರೈಲಿನ ಜನರೇಟರ್‌ ಕೋಚ್‌ನಲ್ಲಿ ಪಕ್ಕದ ಪ್ರಯಾಣಿಕರ ಕೋಚ್‌ನಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪಶ್ಚಿಮ ರೈಲ್ವೆಯ ಸಿಪಿಆರ್‌ಒ ಸುಮಿತ್ ಠಾಕೂರ್ ಹೇಳಿದ್ದಾರೆ.

ಘಟನೆ ಬಳಿಕ ಕೋಚ್‌ನ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಈ ರೈಲಿನಿಂದ ಕೋಚ್ ಅನ್ನು ಬೇರ್ಪಡಿಸಿದ ನಂತರ ಪ್ರಯಾಣ ಬೆಳೆಸಲಿದೆ ಎಂದು ಹೇಳಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಪವರ್ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಬಿ1 ಕೋಚ್‌ಗೆ ವ್ಯಾಪಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕರಂರಾಜ್ ವಘೇಲಾ ತಿಳಿಸಿದ್ದಾರೆ, ಈಗ ಬೆಂಕಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ. ಘಟನೆ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಸುರಕ್ಷತೆಗಾಗಿ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು