News Kannada
Tuesday, February 27 2024
ಗುಜರಾತ್

ಗುಜರಾತ್ ನಲ್ಲಿ ಟ್ರಕ್ ಗಳ ಮುಖಾಮುಖಿ ಡಿಕ್ಕಿ: 10 ಮಂದಿ ದುರ್ಮರಣ

gujarat 10 people died
Photo Credit :

ಅಹಮದಾಬಾದ್: ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್-ಬಗೋದ್ರಾ ಹೆದ್ದಾರಿಯಲ್ಲಿ ಇಂದು (ಆ.11) ನಡೆದಿದೆ.

ಸುಮಾರು 13 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್ ವೊಂದು ಹೆದ್ದಾರಿಯಲ್ಲಿ ನಿಂತಿತ್ತು. ಈ ಸಂದರ್ಭದಲ್ಲಿ ಬಂದ ಮತ್ತೊಂದು ಟ್ರಕ್, ಮಿನಿ ಟ್ರಕ್’ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 10 ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಐವರು ಮಹಿಳೆಯರು, ಮೂವರು ಮಕ್ಕಳು ಹಾಗೂ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

ಚೋಟಿಲಾಗೆ ತೆರಳಿದ್ದ ಮಿನಿ ಟ್ರಕ್ ಅಹಮದಾಬಾದ್’ಗೆ ಬರುತ್ತಿತ್ತು. ಈ ವೇಳೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು