News Kannada
Sunday, October 02 2022

ಹರ್ಯಾಣ

ರೈತರ ಪ್ರತಿಭಟನಾ ಸ್ಥಳದಲ್ಲಿ ಅಪಘಾತ: ಮೂವರು ಮಹಿಳೆಯರ ಸಾವು - 1 min read

acccident
Photo Credit :

ದೆಹಲಿ- ಹರಿಯಾಣದ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಗುರುವಾರ ಮುಂಜಾನೆ ಅಪಘಾತ ಸಂಭವಿಸಿದೆ.
ಪ್ರತಿಭಟನಾ ನಿರತ ಮಹಿಳಾ ರೈತರ ಮೇಲೆ ಟ್ರಕ್ ಹರಿದು ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.

ದೆಹಲಿ ಹರಿಯಾಣ ಗಡಿಯಲ್ಲಿ ರೊಟೇಷನ್ ಮೇಲೆ ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿಯೆಲ್ಲಾ ಪ್ರತಿಭಟನೆ ನಡೆಸಿ, ಇಂದು ಮುಂಜಾನೆ ಮನೆಗೆ ತೆರಳಲು ಡಿವೈಡರ್ ಮೇಲೆ ಕುಳಿತು ರಿಕ್ಷಾಗಾಗಿ ಕಾಯುತ್ತಿದ್ದರು.

ಈ ವೇಳೆ ವೇಗವಾಗಿ ಬಂದ ಟ್ರಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ದಾಖಲು ಮಾಡುವ ವೇಳೆಯಲ್ಲಿ ಸಾವನ್ನಪ್ಪಿದ್ದಾರೆ.

ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಪಂಜಾನ್ ನ ಮಾನ್ಸಾ ಜಿಲ್ಲೆಯವರು ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

See also  ಮುಂದಿನ ಮೂರು ದಿನ ತೀವ್ರ ಕಳಪೆಯಾಗಿರಲಿದೆ ದೆಹಲಿಯ ವಾಯು ಗುಣಮಟ್ಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು