News Kannada
Sunday, October 02 2022

ಹಿಮಾಚಲ ಪ್ರದೇಶ

ಹಿಮಾಚಲ ಪ್ರದೇಶ: ಉತ್ತರ ಮತ್ತು ಪೂರ್ವ ಭಾರತದಲ್ಲಿ ಪ್ರವಾಹ, 50 ಜನರು ಸಾವು! - 1 min read

Himachal Pradesh: Floods in north and east India, 50 dead
Photo Credit : IANS

ಹಿಮಾಚಲ ಪ್ರದೇಶ: ಉತ್ತರ ಮತ್ತು ಪೂರ್ವ ಭಾರತದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತದಲ್ಲಿ ಹತ್ತಕ್ಕಿಂತಲೂ ಹೆಚ್ಚು ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ ಇದಕ್ಕಿಂತಲೂ ಹೆಚ್ಚಾಗಿರಬಹುದು ಎಂದು ಶಂಕಿಸಲಾಗಿದೆ.

ಕಳೆದ ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶ ಉತ್ತರಾಖಂಡ ಮತ್ತು ಒಡಿಶಾದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಮಳೆಯಿಂದಾಗಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ನೂರಾರು ಹಳ್ಳಿಗಳು, ಮಣ್ಣಿನಿಂದ ಮಾಡಿದ ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಜಲಾವೃತವಾಗಿವೆ.

ಮುಂದಿನ ಎರಡು ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ನಾಪತ್ತೆಯಾದ ಐವರು ಭಾನುವಾರ ಪತ್ತೆಯಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ. ಮಂಡಿ, ಕಂಗ್ರಾ ಮತ್ತು ಚಂಬಾ ಜಿಲ್ಲೆಗಳಲ್ಲಿ ಗರಿಷ್ಠ ಹಾನಿ ವರದಿಯಾಗಿದೆ.

See also  ಮೈಸೂರು: ಪ್ರಜ್ಞಾವಂತರ ಗಮನಸೆಳೆದ ದೇವನೂರರ ಆರ್‌ಎಸ್‌ಎಸ್: ಆಳ, ಅಗಲ ಕೃತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು