ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಸುಖದೂಲ್ ಸಿಂಗ್ ಹತ್ಯೆಯ ಹೊಣೆಯನ್ನು ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ.
ಈ ಸಂಬಂಧ ಪೋಸ್ಟ್ ಪ್ರಕಟಿಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಗುರ್ಲಾಲ್ ಬ್ರಾರ್ ಮತ್ತು ವಿಕ್ಕಿ ಮಿದ್ದುಖೇರಾ ಹತ್ಯೆಯಲ್ಲಿ ಸುಖದೂಲ್ ಸಿಂಗ್ ಪ್ರಮುಖ ಪಾತ್ರವಹಿಸಿದ್ದ. ಈ ಕಾರಣಕ್ಕೆ ಆತನನ್ನು ಹತ್ಯೆ ಮಾಡಲಾಗಿದೆ. ಆತನ ಪಾಪಗಳಿಗೆ ಶಿಕ್ಷೆ ನೀಡಲಾಗಿದೆ ಎಂದು ಬರೆಯಲಾಗಿದೆ.
ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿಆರೋಪಿಯಾಗಿರುವ ಲಾರೆನ್ಸ್ ಬಿಷ್ಣೋಯ್ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಅಹಮದಾಬಾದ್‌ನಲ್ಲಿ ಜೈಲಿನಲ್ಲಿದ್ದು, ಎನ್‌ಐಎ ತನಿಖೆ ನಡೆಸುತ್ತಿದೆ.
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತೀಯ ಸರ್ಕಾರಿ ಏಜೆಂಟರಿಗೆ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸಂಸತ್ತಿಗೆ ತಿಳಿಸಿದ ಬಳಿಕ ಕೆನಡಾ ಮತ್ತು ಭಾರತದ ಸಂಬಂಧ ಹಳಸಿದೆ. ಈ ಸಂದರ್ಭದಲ್ಲೇ ಸುಖದೂಲ್ ಸಿಂಗ್ ಹತ್ಯೆ ನಡೆದಿದೆ.