ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ರಖಾಮಾ ಪ್ರದೇಶದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ಎನ್ಕೌಂಟರ್ ನಡೆದಿದ್ದು, ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಈತ ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ. ಭದ್ರತಾ ಪಡೆಗಳ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಇನ್ನಷ್ಟು ಉಗ್ರರನ್ನು ಹೊಡೆದುರುಳಿಸುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.