NewsKarnataka
Wednesday, November 24 2021

ಜಮ್ಮು-ಕಾಶ್ಮೀರ

ಕಾಶ್ಮೀರ ಕಣಿವೆ ತೊರೆಯುವಂತೆ ವಲಸೆ ಕಾರ್ಮಿಕರಿಗೆ ಎಚ್ಚರಿಕೆ ನೀಡಿದ ಉಗ್ರರು

ಶ್ರೀನಗರ : ಲಷ್ಕರ್-ಎ-ತೊಯ್ಬಾದಸಹ ಸಂಘಟನೆ, ಭಯೋತ್ಪಾದಕ ಗುಂಪು ಯುನೈಟೆಡ್ ಲಿಬರೇಷನ್ ಫ್ರಂಟ್, ಕಾಶ್ಮೀರದಲ್ಲಿ ಇಬ್ಬರು ಬಿಹಾರಿ ಕಾರ್ಮಿಕರ ಭೀಕರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. ವಲಸಿಗರ ಮೇಲೆ ಇತ್ತೀಚಿನ ದಾಳಿಗಳ ನಡುವೆ, ಭಯೋತ್ಪಾದಕ ಸಂಘಟನೆ ವಲಸೆ ಕಾರ್ಮಿಕರಿಗೆ  ಕಾಶ್ಮೀರ ಕಣಿವೆಯನ್ನು ತೊರೆಯುವಂತೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾನುವಾರ ಮನೆಗೆ ನುಗ್ಗಿದ ಭಯೋತ್ಪಾದಕರು ಬಿಹಾರದ ಇಬ್ಬರು ಕಾರ್ಮಿಕರನ್ನು ಗುಂಡಿಕ್ಕಿ ಕೊಂದರು ಮತ್ತು ಇನ್ನೊಬ್ಬರನ್ನು ಗಾಯಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರ ಮೇಲೆ ನಡೆದ ಸರಣಿ ದಾಳಿಗಳಲ್ಲಿ ಇದು ಇತ್ತೀಚಿನದು.

ಇದು ಒಂದು ದಿನದಲ್ಲಿ ಸ್ಥಳೀಯೇತರ ಕಾರ್ಮಿಕರ ಮೇಲೆ ನಡೆದ ಮೂರನೇ ಭಯೋತ್ಪಾದಕ ದಾಳಿಯಾಗಿದೆ  ಇದಕ್ಕೂ ಮುನ್ನ ಬಿಹಾರದ ಬೀದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಬಡಗಿಯನ್ನು ಶನಿವಾರ ಸಂಜೆ ಗುಂಡಿಕ್ಕಿ ಕೊಂದಿದ್ದರು.

ಈ ತಿಂಗಳು, ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಮೇಲೆ ನಡೆದ ಉದ್ದೇಶಿತ ದಾಳಿಯಲ್ಲಿ ೧೧ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!