News Kannada
Saturday, September 23 2023
ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಹತರಾದ ನಾಲ್ವರು ಉಗ್ರರು

New Project 6 5
Photo Credit : IANS

ಜಮ್ಮು ಮತ್ತು ಕಾಶ್ಮೀರ: ನಿನ್ನೆ ರಾತ್ರಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಕುಪ್ವಾರ ಮತ್ತು ಕುಲ್ಗಾಮ್ ಜಿಲ್ಲೆಗಳ ಎರಡು ಪ್ರತ್ಯೇಕ ಘಟನೆಗಳಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಸತ್ತವರಲ್ಲಿ ಒಬ್ಬ ಪಾಕಿಸ್ತಾನಿ ಉಗ್ರಗಾಮಿ ಲಷ್ಕರ್-ಇ-ತೊಯ್ಬಾಗಾಗಿ ಕೆಲಸ ಮಾಡುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶೌಕತ್ ಅಹ್ಮದ್ ಶೇಖ್ ಎಂಬ ಉಗ್ರನ ಬಂಧನದ ಮಾಹಿತಿ ಮೇರೆಗೆ ಕುಪ್ವಾರ ಜಿಲ್ಲೆಯ ಲೋಲಾಬ್ ಪ್ರದೇಶದಲ್ಲಿ ಸೇನೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಇಕ್ರಮ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಭದ್ರತಾ ಪಡೆಗಳು ಸುತ್ತುವರಿದಿವೆ.

ಈ ಹಿನ್ನೆಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ವಿರುದ್ಧ ದಿಕ್ಕಿನಲ್ಲಿ ಗುಂಡಿನ ದಾಳಿ ನಡೆಸಿವೆ. ಘಟನೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಲೋಲಾಬ್‌ನಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ.

ಈ ನಡುವೆ ಕುಲ್ಗಾಂ ಜಿಲ್ಲಾ ದಮ್ಹಾಲ್ ಹಂಜಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇದುವರೆಗೆ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.

See also  ನಾಗರಹೊಳೆ ರಾಷ್ಟ್ರೀಯ ಉದ್ಯಾನ: ಕಾಡುಪ್ರಾಣಿಗಳಿಗೆ ಸ್ವರ್ಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು