News Kannada
Tuesday, October 04 2022

ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ - 1 min read

Two terrorists killed in encounter with security forces
Photo Credit :

ಜಮ್ಮು-ಕಾಶ್ಮೀರ: ಆವಂತಿಪೋರಾದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತ್ಯೆಗೀಡಾಗಿರುವ ಘಟನೆ ಸೋಮವಾರ (ಜುಲೈ 11) ನಡೆದಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ವಂಡಕಾಪೋರಾದಲ್ಲಿ ಎನ್ ಕೌಂಟರ್ ನಡೆದಿದೆ.  ಘಟನಾ ಸ್ಥಳದಲ್ಲಿ ಒಂದು ಅಮೆರಿಕ ನಿರ್ಮಿತ ರೈಫಲ್, ಒಂದು ಪಿಸ್ತೂಲ್ ಸೇರಿದಂತೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ಭಾರತೀಯ ಸೇನೆ, ಪೊಲೀಸರು ಹಾಗೂ ಸಿಆರ್ ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆಂದು ವರದಿ ವಿವರಿಸಿದೆ.

See also  ಪುಲ್ವಾಮ:ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು