ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗಂಗೂ ಎಂಬಲ್ಲಿ ಉಗ್ರರು ಯೋಧರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಸಿ ಆರ್ ಪಿ ಎಫ್ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
“ಸಮೀಪದ ಆಪಲ್ ತೋಟದಿಂದ ಪುಲ್ವಾಮಾದ ಗಂಗೂ ಕ್ರಾಸಿಂಗ್ ನಲ್ಲಿ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಭಯೋತ್ಪಾದಕ ಘಟನೆಯಲ್ಲಿ ಸಿ ಆರ್ ಪಿ ಎಫ್ ಒಬ್ಬ ಎಎಸ್ಐ ವಿನೋದ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಹುತಾತ್ಮರಾದರು.
ಹೆಚ್ಚುವರಿ ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿವೆ ಮತ್ತು ದಾಳಿಕೋರರನ್ನು ಬಂಧಿಸಲು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.