News Kannada
Saturday, August 13 2022

ಜಮ್ಮು-ಕಾಶ್ಮೀರ

ಶ್ರೀನಗರ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಮಂಜೂರು ಮಾಡಿದ ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದ ಎಲ್ ಜಿ - 1 min read

Many areas of Jammu and Kashmir have been freed from militancy, says LG

ಶ್ರೀನಗರ: ಅಮರನಾಥ ಗುಹೆಯ ಬಳಿ ಜುಲೈ 8ರಂದು ಸಂಭವಿಸಿದ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬದವರಿಗೆ  2 ಲಕ್ಷ ರೂ.ಗಳ ಪರಿಹಾರವನ್ನು ಮಂಜೂರು ಮಾಡಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಗಳಿಗೆ ತಲಾ 50,000 ರೂ.ಗಳನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಮಂಜೂರು ಮಾಡಿದೆ.

ಅಮರನಾಥ್  ಗುಹೆಯ ಬಳಿ ಸಂಭವಿಸಿದ ಪ್ರವಾಹ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮಂಜೂರು ಮಾಡಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಭಾರಿಯಾಗಿದ್ದೇನೆ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ.

ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ.ಗಳ ಆರ್ಥಿಕ ನೆರವನ್ನು ವಿಸ್ತರಿಸಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. ಕೇಂದ್ರಾಡಳಿತ ಪ್ರದೇಶ ಆಡಳಿತವು ಈಗಾಗಲೇ ಮೃತರ ಕುಟುಂಬಗಳಿಗೆ ತಲಾ ೫ ಲಕ್ಷ ರೂ.ಗಳನ್ನು ವಿತರಿಸಿದೆ.

See also  ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಉಗ್ರರನ್ನು ಹತ್ಯೆ ಮಾಡಿದ ಸೇನಾಪಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು