News Kannada
Thursday, August 18 2022

ಜಮ್ಮು-ಕಾಶ್ಮೀರ

ಶ್ರೀನಗರ: ಕುಲ್ಗಾಮ್ ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ - 1 min read

Two AR jawans injured in gunbattle in Mon district

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬ್ರೈಹಾರ್ಡ್ ಕತ್ಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಗುಂಡಿನ ಚಕಮಕಿ ಪ್ರಾರಂಭವಾಗಿದೆ.

ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದಾರೆ. ಅಷ್ಟರಲ್ಲಿ ಅಲ್ಲಿ ಅಡಗಿದ್ದ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು, ಇದಕ್ಕೆ ಭದ್ರತಾ ಪಡೆಗಳು ಪ್ರತೀಕಾರದ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಾದ್ಯಂತ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್ಕೌಂಟರ್ಗಳು ನಡೆದಿವೆ. ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್ ಗಳನ್ನು ಹತ್ಯೆಗೈಯಲಾಗಿದೆ.

ಹೆಚ್ಚಿನ ಕಾರ್ಯಾಚರಣೆಗಳನ್ನು ನಿರ್ದಿಷ್ಟ ಗುಪ್ತಚರ ಮಾಹಿತಿಗಳ ಆಧಾರದ ಮೇಲೆ ಪೊಲೀಸರು ಮತ್ತು ಸೇನೆ ಜಂಟಿಯಾಗಿ ನಡೆಸಿವೆ.

See also  ಶ್ರೀನಗರ: ಹವಾಮಾನ ವೈಪರೀತ್ಯದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಸಂಚಾರ ಬಂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು