News Kannada
Friday, September 29 2023
ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ: ಎಲ್ಇಟಿ ಉಗ್ರನ ಎನ್‌ಕೌಂಟರ್

Jammu and Kashmir: LeT terrorist killed in encounter
Photo Credit : Pexels

ಜಮ್ಮು-ಕಾಶ್ಮೀರ: ಕಣಿವೆ ರಾಜ್ಯದಲ್ಲಿ‌ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ರ್ಕ-ಎ-ತೊಯ್ಬಾ ಗೆ ಸೇರಿದ ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಬಾರಾಮುಲ್ಲಾದ ಪಟ್ಟಣ ನಿವಾಸಿ ಇರ್ಷಾದ್ ಅಹ್ಮದ್ ಭಟ್ ಸಾವನ್ನಪ್ಪಿದ ಉಗ್ರ.

ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿನ್ನಿರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ್ದಾರೆ. ಪ್ರತಿ ದಾಳಿಯ ಸಂದರ್ಭ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್​ಇಟಿಯೊಂದಿಗೆ ಸಂಪರ್ಕ ಹೊಂದಿದ್ದ. ಈತನ ಬಳಿ ಇದ್ದ 1 ಎಕೆ47 ರೈಫಲ್, 30 ಸುತ್ತು ಗುಂಡು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

See also  ಚೆನ್ನೈ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು