ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೇದಿದ್ದು, ಇದರ ಪರಿಣಾಮ ವಲಸೆ ಕಾರ್ಮಿಕನೊಬ್ಬ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾದ ಗದೂರ ಪ್ರದೇಶದಲ್ಲಿ ಭಯೋತ್ಪಾದಕರು ಹೊರಗಿನ ಕಾರ್ಮಿಕರ ಮೇಲೆ ಗ್ರೆನೇಡ್ ಎಸೆದಿದ್ದಾರೆ.
ಸದ್ಯ ಸೇನಾಪಡೆ ಪ್ರದೇಶವನ್ನ ಸುತ್ತುವರಿದಿದೆ.
ಹೆಚ್ಚಿನ ವಿವರಗಳನ್ನ ತಿಳಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.