News Kannada
Friday, October 07 2022

ಜಮ್ಮು-ಕಾಶ್ಮೀರ

ಜಮ್ಮುಕಾಶ್ಮೀರ: ಪೊಲೀಸರ ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ 3 ಎಲ್‌ಇಟಿ ಉಗ್ರರ ಬಂಧನ - 1 min read

Mangaluru: Applications invited for scholarships for children of ex-servicemen
Photo Credit : IANS

ಸೋಪೋರ್: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಾರಿಕ್ ಅಶ್ರಫ್, ಸಕ್ಲೇನ್ ಮುಷ್ತಾಕ್ ಮತ್ತು ತೌಫೀಕ್ ಹಸನ್ ಶೇಖ್ ಎಂಬವನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಉತ್ತರ ಕಾಶ್ಮೀರದ ಬೊಮೈ ಚೌಕ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಗೋರಿಪುರದಿಂದ ಬೊಮೈ ಕಡೆಗೆ ಬರುತ್ತಿದ್ದ ಮೂವರ ಅನುಮಾನಾಸ್ಪದ ಚಲನವಲನವನ್ನು ಗಮನಿಸಲಾಗಿದೆ. ಕೂಡಲೇ ಅವರನ್ನು ತಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಅವರು ಪರಾರಿಯಾಗಲು ಪ್ರಯತ್ನಿಸಿದರು, ಆದರೆ ಭದ್ರತಾ ಪಡೆಗಳು ಚಾಕಚಕ್ಯತೆಯಿಂದ ಮೂವರನ್ನು ವಶಪಡಿಸಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆ ವೇಳೆ ಉಗ್ರರ ಬಳಿ ಇದ್ದ ಮೂರು ಹ್ಯಾಂಡ್ ಗ್ರೆನೇಡ್‌ಗಳು, ಒಂಬತ್ತು ಪೋಸ್ಟರ್‌ಗಳು ಮತ್ತು 12 ಪಾಕಿಸ್ತಾನಿ ಧ್ವಜಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಗ್ರರ ವಿರುದ್ಧ ಬೋಮಾಯಿ ಪೊಲೀಸ್ ಠಾಣೆಯಲ್ಲಿ ಸಂಬಂಧಪಟ್ಟ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

 

See also  ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಯ ಗುಂಡಿನ ಕಾಳಗಕ್ಕೆ ಇಬ್ಬರು ಉಗ್ರರು ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು