ಶ್ರೀನಗರ, ಅ.18: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹರ್ಮೆನ್ ಪ್ರದೇಶದಲ್ಲಿ ಭಯೋತ್ಪಾದಕರು ಹ್ಯಾಂಡ್ ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಉತ್ತರ ಪ್ರದೇಶದ ಇಬ್ಬರು ಕಾರ್ಮಿಕರು, ಅಂದರೆ ಯುಪಿಯ ಕನೂಜ್ ನಿವಾಸಿಗಳಾದ ಮೊನಿಶ್ ಕುಮಾರ್ ಮತ್ತು ರಾಮ್ ಸಾಗರ್ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಘಟನಾ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ” ಎಂದು ಕಾಶ್ಮೀರ ವಲಯ ಪೊಲೀಸರು ಮಂಗಳವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, ಗ್ರೆನೇಡ್ ದಾಳಿ ನಡೆಸಿದ್ದ ಭಯೋತ್ಪಾದಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಲೀಟಿ ಇಮ್ರಾನ್ ಬಶೀರ್ ಗನಿ ಎಂಬುವವನನ್ನು ಶೋಪಿಯಾನ್‌ನ ಹರ್ಮೆನ್‌ನಲ್ಲಿ ಗ್ರೆನೇಡ್ ದಾಳಿ ಮಾಡಿದ ಕಾರಣ ಶೋಪಿಯಾನ್ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ಮತ್ತು ಶೋಧಕಾರ್ಯ ನಡೆಯುತ್ತಿವೆ” ಎಂದು ಪೊಲೀಸರು ತಿಳಿಸಿದ್ದಾರೆ.