ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನೆಲಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ಯೋಧ ಗಾಯಗೊಂಡಿದ್ದಾರೆ.
ಪೂಂಚ್ ಜಿಲ್ಲೆಯ ಕೆರ್ನಿ ಸೆಕ್ಟರ್ ನಲ್ಲಿ ಇಂದು ಸ್ಫೋಟ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
“ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ. ಗಾಯಗೊಂಡ ಸೈನಿಕನನ್ನು ಉಧಂಪುರ ಪಟ್ಟಣದ ಕಮಾಂಡ್ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.