ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಭಾನುವಾರ ಮತ್ತೊಬ್ಬ ಕಾಶ್ಮೀರಿ ಪಂಡಿತರನ್ನು ಹತ್ಯೆ ಮಾಡಿದ್ದಾರೆ. ಅಚನ್ ಗ್ರಾಮದ ಕಾಶಿನಾಥ ಪಂಡಿತ್ ಅವರ ಪುತ್ರ ಸಂಜಯ್ ಪಂಡಿತ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಉಗ್ರರು ಗುಂಡಿನಿಂದ ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಅವರು ಬ್ಯಾಂಕ್ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಉಗ್ರರ ಶೋಧಕ್ಕಾಗಿ ಭದ್ರತಾ ಪಡೆಗಳು, ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.