News Kannada
Sunday, September 25 2022

ಝಾರ್ಖಂಡ್

ಜಾರ್ಖಂಡ್‌: ಟ್ರಕ್ ಮತ್ತು ಬಸ್ ಮುಖಾಮುಖಿ, 7 ಜನರು ಸಾವು - 1 min read

Photo Credit :

ಪಾಕುರ್ : ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಬುಧವಾರ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 24 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮ್ರಪಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೇರ್‌ಕೋಲಾ ಗ್ರಾಮದಲ್ಲಿ ಈ ಅಪಘಾತ(accident) ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ‘ವೇಗವಾಗಿ ಬಂದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ’ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅಜಿತ್ ಕುಮಾರ್ ವಿಮಲ್ ಹೇಳಿದರು.

ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದರು.ಹಲವಾರು ಜನರು ಬಸ್ಸಿನೊಳಗೆ ಸಿಕ್ಕಿಹಾಕಿಕೊಂಡಿದ್ದು, ಗ್ಯಾಸ್ ಕಟರ್ಗಳೊಂದಿಗೆ ಸರಳುಗಲಕನ್ನು ಕಿತ್ತುಹಾಕಿದ ನಂತರ ಅವರನ್ನು ಹೊರತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದ ಪರಿಣಾಮ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಸಿಕ್ಕಿಹಾಕಿಕೊಂಡಿತ್ತು.ಅದೃಷ್ಟವಶಾತ್, ಟ್ರಕ್‌ನಲ್ಲಿದ್ದ ಯಾವುದೇ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿಲ್ಲ, ಇಲ್ಲದಿದ್ದರೆ ಅಪಘಾತವು ಇನ್ನೂ ಹೆಚ್ಚಿನ ಜೀವಗಳನ್ನು ತೆಗೆದುಕೊಳ್ಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ಗಮನಿಸಿದರೆ, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕವಿದೆ ಎಂದು ವಿಮಲ್ ಹೇಳಿದರು.

See also  ಜಾರ್ಖಂಡ್‌ನ ನ್ಯಾಯಾಧೀಶ ಉತ್ತಮ್ ಆನಂದ್ ಸಾವು: 17 ಮಂದಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು