News Kannada
Sunday, February 05 2023

ಝಾರ್ಖಂಡ್

ರಾಂಚಿಯಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ

Photo Credit : IANS

ರಾಂಚಿ: ಐವರು ಕಾಮುಕರು 15 ವರ್ಷದ ಬಾಲಕಿಯನ್ನು ಅಪಹರಿಸಿ, ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಂಚಿಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳು ಬುಧವಾರ ರಾತ್ರಿ ಧುರ್ವಾದ ರಿಂಗ್ ರೋಡ್‌ನಲ್ಲಿ ಬಲವಂತವಾಗಿ ಕಾರಿಗೆ ತನ್ನನ್ನು ಹತ್ತಿಸಿಕೊಂಡರು ಎಂದು ಬಾಲಕಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಪೊಲೀಸರ ಗಸ್ತು ತಂಡವು ರತು ಪೊಲೀಸ್ ಠಾಣೆ ವ್ಯಾಪ್ತಿಯ ದಲಾದಲಿಯ ರೆಸ್ಟೋರೆಂಟ್ ಬಳಿ ಕಾರನ್ನು ಪತ್ತೆ ಮಾಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ರಾಂಚಿ-ಗ್ರಾಮೀಣ) ನೌಶಾದ್ ಆಲಂ ಅವರು ಪಿಟಿಐಗೆ ತಿಳಿಸಿದ್ದಾರೆ.

ಈ ಕಾರಿನಲ್ಲಿ ಏನೋ ನಡೆಯಬಾರದ ಕೃತ್ಯ ನಡೆಯುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ ಪೊಲೀಸ್ ಸಿಬ್ಬಂದಿ, ಕಾರನ್ನು ಪರಿಶೀಲಿಸಲು ಹೋದಾಗ ಐವರು ಪುರುಷರೊಂದಿಗೆ ಅಳುತ್ತಿದ್ದ ಬಾಲಕಿಯನ್ನು ಕಂಡಿದ್ದಾರೆ ಎಂದು ನೌಶಾದ್ ಆಲಂ ಹೇಳಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ 20 ವರ್ಷದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿಯನ್ನು ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

See also  ಶಿವಮೊಗ್ಗ : ಅಪ್ರಾಪ್ತಳ ಮೇಲೆ ಅತ್ಯಾಚಾರ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು