News Kannada
Friday, December 02 2022

ಕೇರಳ

ವಾಟ್ಸಾಪ್ ನಲ್ಲಿ ಶುರುವಾದ ಜಗಳ ವ್ಯಕ್ತಿಯೊಬ್ಬನ ಸಾವಿನಲ್ಲಿ ಅಂತ್ಯ

Photo Credit :

ತಿರುವನಂತಪುರಂ :  ಕೇರಳದ ಪತ್ತನಂತಿಟ್ಟಾ ಜಿಲ್ಲೆಯಲ್ಲಿ ವಾಟ್ಸಾಪ್ ಸಂಭಾಷಣೆಯಿಂದಾಗಿ ಶುರುವಾದ ಜಗಳ 42 ವರ್ಷದ ವ್ಯಕ್ತಿಯನ್ನು ಬಲಿ ತೆಗೆದುಕೊಂಡಿರುವ ದುರ್ಘಟನೆ  ನಡೆದಿದೆ.

ಮೃತ ವ್ಯಕ್ತಿಯನ್ನು ರಂಜಿತ್ ಎಂದು ಗುರುತಿಸಲಾಗಿದೆ. ಅವರು ಜಿಲ್ಲೆಯ ಪುತುವಲ್‌ನಲ್ಲಿ ಪತ್ರಿಕೆ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಾಟ್ಸಾಪ್ ಸಂಭಾಷಣೆಯ ವಿಚಾರವಾಗಿ ನಡೆದ ಗಲಾಟೆಯಲ್ಲಿ ತಲೆಗೆ ಗಂಭೀರ ಗಾಯಗಳಾಗಿದ್ದ 42 ವರ್ಷದ ವ್ಯಕ್ತಿಯೊಬ್ಬರು, ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ಪೊಲೀಸರ ಪ್ರಕಾರ, ರಂಜಿತ್ ಅವರ ನೆರೆಹೊರೆಯವರಾದ ಅನಿಲ್ (43) ವಾಟ್ಸಾಪ್ ಗುಂಪಿನಲ್ಲಿ ಅವಮಾನಕರ ಕಾಮೆಂಟ್‌ನಿಂದ ಅಸಮಾಧಾನಗೊಂಡಿದ್ದರು. ಈ ಸಂಬಂಧ ಮಾರ್ಚ್ 27 ರಂದು ಇಬ್ಬರೂ ಜಗಳವಾಡಿದ್ದಾರೆ.

ಜಗಳ ತಾರಕಕ್ಕೇರಿ ಹೊಡಿಬಡಿ ನಡೆದಿದೆ. ಈ ವೇಳೆ ರಂಜಿತ್‌ ಕೆಳಗೆ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ತಲೆಗೆ ಮಾರಣಾಂತಿಕ ಗಾಯವಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಅನಿಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

See also  ಚಾರಣಕ್ಕೆ ಹೋಗಿ ಬಂಡೆಯಲ್ಲಿ ಸಿಲುಕಿದ್ದ ಯುವಕನನ್ನು ರಕ್ಷಿಸಿದ ಸೇನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು