News Kannada
Wednesday, August 10 2022

ಕೇರಳ

ಕೇರಳ: ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ, 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್ - 1 min read

Kerala: Heavy rains lash various parts of the state, red alert issued for 8 districts

ಕೇರಳ:  ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಕೇರಳದ ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ನದಿಗಳು ಉಕ್ಕಿ ಹರಿದು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ನುಗ್ಗಿರುವ ಕಾರಣ ಅನೇಕ ಜನರು ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ.

ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಹಳದಿ ಅಲರ್ಟ್ ಜಾರಿಯಲ್ಲಿರುವ ತಿರುವನಂತಪುರಂ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಅತಿ ಉದ್ದದ ನದಿಯಾದ ಪೆರಿಯಾರ್ ಉಕ್ಕಿ ಹರಿದು ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ನುಗ್ಗಿದೆ. ನಿರಂತರ ಮಳೆಯಿಂದಾಗಿ ಚಾಲಕುಡಿ, ಪಂಪಾ, ಮಣಿಮಾಲಾ ಮತ್ತು ಅಚನ್‌ಕೋವಿಲ್ ಸೇರಿದಂತೆ ಇತರ ನದಿಗಳು ಅಪಾಯದ ಮಟ್ಟವನ್ನು ಸಮೀಪಿಸುತ್ತಿವೆ.  ನದಿ ಪಾತ್ರದಲ್ಲಿನ ಜನರು ಸ್ಥಳಾಂತರಗೊಳ್ಳುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

See also  ಕೇರಳ: ರಾಹುಲ್ ಗಾಂಧಿ ಕಚೇರಿ ಧ್ವಂಸಗೊಳಿಸಿದವರ ವಿರುದ್ಧ ಕ್ರಮ ಖಚಿತ- ಪಿಣರಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು