ತಿರುವನಂತಪುರಂ: ಮಲಪ್ಪುರಂನ ತಿರೂರ್ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಿಕ್ಷಣ ಅಧ್ಯಯನ ಪ್ರವಾಸದ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ವಿದ್ಯಾರ್ಥಿಯನ್ನು ಮಿಥಿಲಾಜ್ ಎಂದು ಗುರುತಿಸಲಾಗಿದ್ದು, ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಲಿಯಲ್ಲಿ ಈ ಘಟನೆ ನಡೆದಿದೆ. ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ೪೦ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಆದಿಮಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮಿಥಿಲಾಜ್ ಕಾಣೆಯಾಗಿದ್ದಾನೆ ಎಂದು ಅವನ ಸಹಪಾಠಿಗಳು ತಿಳಿಸಿದ ನಂತರ ಶೋಧ ನಡೆಸಿದಾಗ ಮಿಥಿಲಾಜ್ ನ ಶವವನ್ನು ಸ್ಥಳೀಯರು ವಶಪಡಿಸಿಕೊಂಡರು.