News Kannada
Tuesday, September 27 2022

ಮಧ್ಯ ಪ್ರದೇಶ

ಮೊಬೈಲ್ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕ! - 1 min read

Photo Credit :

ಮಧ್ಯಪ್ರದೇಶ: ತನ್ನ ತಂದೆ ಮೊಬೈಲಿಗೆ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ 14 ವರ್ಷದ ಬಾಲಕನೊಬ್ಬ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.

ಬಾಲಕನ ತಂದೆ ದಿನಗೂಲಿ ಕಾರ್ಮಿಕರಾಗಿದ್ದು, ಹಣಕಾಸಿನ ಮುಗ್ಗಟ್ಟಿನಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಅಲ್ಲದೇ ಬಾಲಕ ಮೊಬೈಲ್ ಗೇಮ್ಸ್ ಗೆ ದಾಸನಾಗಿದ್ದು, ಕಳೆದ ಕೆಲವು ದಿನಗಳಿಂದ ಈ ಗೇಮ್ ಆಡದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ. ಈ ಎಲ್ಲಾ ಕಾರಣಗಳಿಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವುದಾಗಿ ಜಬಲ್ಪುರ ಜಿಲ್ಲಾ ರಕ್ಷಣಾಧಿಕಾರಿ ಅಲೋಕ್ ಶರ್ಮಾ ಮಾಹಿತಿ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಗನ ಮೊಬೈಲ್ ಫೋನಿಗೆ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿರಲಿಲ್ಲವೆನ್ನಲಾಗಿದೆ. ಇದರಿಂದ ಬೇಸರಗೊಂಡ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

 

See also  ಟಿಎನ್, ಕೇರಳ, ಪುದುಚೇರಿ, ಎಪಿ, ಕರ್ನಾಟಕದಲ್ಲಿ ನವೆಂಬರ್ 1 ರವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಮ್ ಡಿ ಮುನ್ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು