News Kannada
Thursday, February 22 2024
ಮಧ್ಯ ಪ್ರದೇಶ

ಮಧ್ಯಪ್ರದೇಶ: 39 ಮಕ್ಕಳಿಗೆ ಒಂದೇ ಸಿರಿಂಜ್ ಬಳಸಿ ಲಸಿಕೆ ನೀಡಿದ ವ್ಯಕ್ತಿಯ ಬಂಧನ

Attempt to sell ganja near Guruvayanakere school: Two arrested
Photo Credit : Pexels

ಮಧ್ಯಪ್ರದೇಶ: ಮಧ್ಯಪ್ರದೇಶದ ಸಾಗರ್ ನಗರದ ಖಾಸಗಿ ಶಾಲೆಯೊಂದರಲ್ಲಿ 39 ಮಕ್ಕಳಿಗೆ ಕೊರೋನ ವೈರಸ್ ವಿರೋಧಿ ಲಸಿಕೆ ಅನ್ನು ನೀಡಲು ಲಸಿಕೆದಾರನೊಬ್ಬ ಒಂದೇ ಸಿರಿಂಜ್ ಅನ್ನು ಬಳಸಿದ್ದಾನೆ ಎಂದು ಆರೋಪಿಸಲಾಗಿದೆ. ನಗರದ ಜೈನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮೆಗಾ ಲಸಿಕೆ ಅಭಿಯಾನದ ವೇಳೆ ಈ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿ ಲಸಿಕೆ ನೀಡಿದಾತ ಹಾಗೂ ಜಿಲ್ಲಾ ಲಸಿಕೆ ಅಧಿಕಾರಿಯನ್ನು ಬಂಧಿಸಿ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

ಜಿತೇಂದ್ರ ಅಹಿರ್ವಾರ್ ಎಂಬುವವನ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಹಿರ್ವಾರ್ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆರೋಗ್ಯ ಇಲಾಖೆಯಿಂದ ಲಸಿಕೆ ಕಾರ್ಯಕ್ರಮವನ್ನು ಕೈಗೊಳ್ಳಲು ತರಬೇತಿ ಪಡೆದಿದ್ದಾನೆ ಎಂದು ಸಾಗರ್ ಜಿಲ್ಲೆಯ ಮುಖ್ಯ ವೈದ್ಯಕೀಯ ಹಾಗೂ ಆರೋಗ್ಯ ಅಧಿಕಾರಿ (ಸಿಎಂಎಚ್‌ಒ) ಡಾ. ಡಿ. ಕೆ. ಗೋಸ್ವಾಮಿ ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು