News Kannada
Sunday, March 03 2024
ಮಧ್ಯ ಪ್ರದೇಶ

ವ್ಯಕ್ತಿಯನ್ನು ಅರೆಬೆತ್ತಲೆ ಮಾಡಿ ಬಾಯಿಯಿಂದ ಶೂ ಎತ್ತಲು ಒತ್ತಾಯಿಸಿದ ವಿಡಿಯೋ ವೈರಲ್

arrested
Photo Credit : Twitter

ಮಧ್ಯಪ್ರದೇಶ: ರೇವಾ ಲ್ಲೆಯಲ್ಲಿ 34 ವರ್ಷದ ವ್ಯಕ್ತಿಯೊಬ್ಬನನ್ನು ಅರೆಬೆತ್ತಲೆ ಮಾಡಿ, ಆತನ ಮೇಲೆ ಹಲ್ಲೆ ನಡೆಸಿ ಬಾಯಿಯಿಂದ ಶೂ ಎತ್ತಿಕೊಳ್ಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೊ ವೈರಲ್ ಆದ ಬಳಿಕ ಪ್ರಮುಖ ಆರೋಪಿ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವ್ಯಕ್ತಿಯೊಬ್ಬನ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿ ಆತನಿಗೆ ಹಿಂಸೆ ನೀಡುತ್ತಿರುವ ಈ ವಿಡಿಯೋ ಎರಡು ವರ್ಷಗಳಿಗಿಂತಲೂ ಹಳೆಯದು.

ಆ ವ್ಯಕ್ತಿ ಬಿಟ್ಟು ಬಿಡುವಂತೆ ಅಂಗಾಲಾಚುತ್ತಿರುವುದು ಇದರಲ್ಲಿ ಕಾಣಿಸುತ್ತದೆ. ಆಸ್ತಿ ವಿವಾದವೇ ಇದಕ್ಕೆ ಕಾರಣ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಡಿಯೊ ನೋಡಿದ ಮೇಲೆ ನಾವು ಪ್ರಮುಖ ಆರೋಪಿ ಜವಾಹರ್ ಸಿಂಗ್ (55), ಗೊಂಡ್ ಬುಡಕಟ್ಟಿನ ಸದಸ್ಯ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಿದ್ದೇವೆ. ಜವಾಹರ್ ಸಿಂಗ್ ಮತ್ತು ಇತರ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ ಗೆ ತಿಳಿಸಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು