News Kannada
Friday, February 23 2024
ಮಧ್ಯ ಪ್ರದೇಶ

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌

ಭೋಪಾಲ್: ಪಂಚ ರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯ ಗೆದ್ದ ಬಿಜೆಪಿ ಸಿಎಂ ಆಯ್ಕೆಯಲ್ಲಿ ಕೊಂಚ ವಿಳಂಬ ಮಾಡಿತ್ತು. ಛತ್ತೀಸಘಡದ ಬೆನ್ನಲ್ಲೇ ಇದೀಗ ಮಧ್ಯಪ್ರದೇಶದ ಹೊಸ ಸಿಎಂ ಹೆಸರು ಘೋಷಣೆ ಮಾಡಲಾಗಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸುದೀರ್ಘ ವರ್ಷಗಳ ಕಾಲ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಶಿವರಾಜ್ ಸಿಂಗ್ ಚವ್ಹಾಣ್ ಬದಲು ಒಬಿಸಿ ನಾಯಕ ಯಾದವ್‌ಗೆ ಮಣೆ ಹಾಕಿದೆ.
Photo Credit : News Kannada

ಮೋಹನ್ ಯಾದವ್ 2013 ರಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.2020 ರಿಂದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೂತನವಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಸೋಮವಾರ ಸಭೆ ನಡೆಸಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದರು.

ನವೆಂಬರ್ 17 ರಂದು ನಡೆದ ಚುನಾವಣೆಯಲ್ಲಿ 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು