NewsKarnataka
Wednesday, December 08 2021

ಮಹಾರಾಷ್ಟ್ರ

ಕಾಮುಕರ ಅಟ್ಟಹಾಸ, ಅಪ್ರಾಪ್ತ ಬಾಲಕಿ ಮೇಲೆ 29 ಜನರಿಂದ ಅತ್ಯಾಚಾರ

ಥಾಣೆ :  ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಡೊಂಬಿವ್ಲಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 21 ಆರೋಪಿಗಳನ್ನು ಬಂಧಿಸಲಾಗಿದೆ.

ಅಪ್ರಾಪ್ತೆ ನೀಡಿದ ದೂರಿನ ಆಧಾರದ ಮೇಲೆ 29 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ತಿಳಿಸಿದ್ದಾರೆ.  ಪೊಲೀಸರ ಪ್ರಕಾರ, ಆರೋಪಿಗಳು ಅಪ್ರಾಪ್ತೆಯ ಸ್ನೇಹಿತರಾಗಿದ್ದಾರೆ.

ಈವರೆಗೂ 21 ಆರೋಪಿಗಳನ್ನು ಬಂಧಿಸಲಾಗಿದೆ. ಇತರ ಇಬ್ಬರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗಿದೆ. 29 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) 376 (ಎನ್ ) 376 (3), 376 (ಡಿ) ಎ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಪೊಲೀಸರು ಹೇಳಿದ್ದಾರೆ.

ಅಪ್ರಾಪ್ತ ಬಾಲಕಿ ಕಾಲ್ವಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದುಷ್ಕರ್ಮಿಗಳಿಗೆ ತೀವ್ರ ಶಿಕ್ಷೆಯಾಗಬೇಕೆಂದು ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!