10 ದಿನಗಳ ಅವಧಿಯಲ್ಲಿ ಆರು ಮಕ್ಕಳು ಸೇರಿದಂತೆ 39 ಮಹಿಳಾ ಕೈದಿಗಳಿಗೆ ಕೋವಿಡ್-19 ಸಾಂಕ್ರಾಮಿಕ ತಗುಲಿರುವುದು ಪತ್ತೆಯಾಗಿದೆ. ಈ ಸೋಂಕಿತರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದ್ದು, ಜೈಲಿನಿಂದ ಬಿಎಂಸಿ ಶಾಲೆಯ ಐಸೋಲೇಷನ್ ಕ್ಯಾಂಪ್ ಗೆ ಸ್ಥಳಾಂತರಿಸಲಾಗಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.
ಗರ್ಭಿಣಿಯೊಬ್ಬರನ್ನು ಹತ್ತಿರದ ಮುನ್ಸಿಪಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪರಿಸ್ಥಿತಿ ಸ್ಥಿರವಾಗಿದೆ ಆದರೆ, ಮುಂಜಾಗ್ರತಾ ಕ್ರಮವಾಗಿ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.