News Kannada
Wednesday, December 07 2022

ಮಹಾರಾಷ್ಟ್ರ

ಕಡಲಿನಚಿನಲ್ಲಿ ರೇವ್ ಪಾರ್ಟಿ 10 ಜನರ ಬಂಧನ

Photo Credit :
ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನ ಕರಾವಳಿಯಲ್ಲಿ ಕ್ರೂಸ್‌ ಹಡಗಿನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ ನಿನ್ನೆ ದಾಳಿ ನಡೆಸಿರುವ ಮಾದಕ ವಸ್ತು ನಿಯಂತ್ರಣ ದಳ (ಎನ್‌ಸಿಬಿ) 10 ಮಂದಿಯನ್ನು ಬಂಧಿಸಿದೆ ಎಂದು ತಿಳಿದುಬಂದಿದೆ.
ದಾಳಿಯ ವೇಳೆ ಅಧಿಕಾರಿಗಳು ಕೊಕೇನ್‌, ಹಶೀಶ್‌ ಹಾಗೂ ಎಂಡಿಎಂಎ ಸೇರಿ ಹಲವು ರೀತಿಯ ನಿಷೇಧಿತ ಮಾದಕ ದ್ರವ್ಯಗಳು ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

ಕಡಲಿನಲ್ಲಿ ಕ್ರೂಸ್‌ ಹಡಗಿನಲ್ಲಿ ಮೋಜು-ಮಸ್ತಿ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಪಡೆದ ಅಧಿಕಾರಿಗಳು ಪ್ರಯಾಣಿಕರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಇದೀಗ ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. 8-10 ಮಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್’ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರು ಹೇಳಿದ್ದಾರೆ.

ಇದೇ ವೇಳೆ ಪಾರ್ಟಿಯಲ್ಲಿ ಸೆಲೆಬ್ರಿಟಿಗಳಿದ್ದರೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ತನಿಖೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಈ ಹಂತದಲ್ಲಿ ಯಾವುದೇ ರೀತಿಯ ಹೇಳಿಕೆಯನ್ನೂ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

See also  ಅಮೆರಿಕ ದಾಳಿಗೆ ಪ್ರತಿದಾಳಿ: ಏರ್‌ಪೋರ್ಟ್ ಬಳಿ ಭಾರಿ ಬಾಂಬ್ ಸ್ಫೋಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು