News Kannada
Friday, January 27 2023

ಮಹಾರಾಷ್ಟ್ರ

ಓಮಿಕ್ರಾನ್ ಪ್ರಕರಣ ಭೀತಿ: ಮಹಾರಾಷ್ಟ್ರದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ

Photo Credit :

ಮುಂಬೈ ಕೊರೋನಾ ರೂಪಾಂತರಿ ಹೊಸ ತಳಿ ಓಮಿಕ್ರಾನ್ ಭೀತಿ ನಡುವೆ ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕೊರೋನಾವೈರಸ್ ಹರಡುವಿಕೆ ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಡಿಸೆಂಬರ್ 31ರವರೆಗೆ ನಗರದಲ್ಲಿ ಸಿಆರ್ ಪಿಸಿ ಸೆಕ್ಷನ್ 144ರ ಅನ್ವಯ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಇದರ ಅನ್ವಯ ಒಂದು ಸ್ಥಳದಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ. ಕೊರೋನಾವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಆದೇಶಿಸಲಾಗಿದೆ. ಯಾವುದೇ ಕಾರ್ಯಕ್ರಮ ಆಯೋಜಕರು, ಸೇವಾದಾರರು, ಅತಿಥಿಗಳು, ಗ್ರಾಹಕರು ಮತ್ತಿತರರು ಸಂಪೂರ್ಣವಾಗಿ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಯಾವುದೇ ಕಾರ್ಯಕ್ರಮದಲ್ಲಿ ಶೇಕಡಾ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಮತ್ತು ಕಾರ್ಯಕ್ರಮ ಆಯೋಜಕರು ಸಂಪೂರ್ಣವಾಗಿ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಅವರು ತಿಳಿಸಿದ್ದಾರೆ.

ಇಂದಿನಿಂದ ಮುಂಬೈ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಆರ್ ಪಿಸಿ ಸೆಕ್ಷನ್ 144ರ ಅನ್ವಯ ನಿರ್ಬಂಧವನ್ನು ಸೋಮವಾರವೇ ಡಿಸಿಪಿ ಹೊರಡಿಸಿದ್ದಾರೆ.

ಯಾವುದೇ ಶಾಪ್, ಮಾಲ್ ಗಳಲ್ಲಿರುವವರು, ಗ್ರಾಹಕರು ಸಂಪರ್ಣವಾಗಿ ಲಸಿಕೆ ಪಡೆದಿರಬೇಕು, ಸಂಪೂರ್ಣ ಲಸಿಕೆ ಪಡೆದವರು ಮಾತ್ರ ಎಲ್ಲಾ ರೀತಿಯ ಸಾರ್ವಜನಿಕ ಸಾರಿಗೆ ಬಳಸಬಹುದಾಗಿದೆ. ಮಹಾರಾಷ್ಟ್ರಕ್ಕೆ ಬರುವ ಎಲ್ಲಾ ಜನರು ಸಂಪೂರ್ಣವಾಗಿ ಲಸಿಕೆ ಪಡೆದಿರಬೇಕು ಅಥವಾ 72 ಗಂಟೆ ಮುಂಚಿನ ಆರ್ ಟಿ -ಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ.

See also  ಕೊವೀಡ್ 19 ಅಪ್ಡೇಟ್ಸ್: ಮಹಾರಾಷ್ಟ್ರದಿಂದ ರಾಜ್ಯಕ್ಕೆ ವಾಪಸಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು