News Kannada
Monday, November 28 2022

ಮಹಾರಾಷ್ಟ್ರ

ಬಿಜೆಪಿ ಮೈತ್ರಿಯಿಂದ ಶಿವಸೇನೆ 25 ವರ್ಷಗಳನ್ನು ವ್ಯರ್ಥ ಮಾಡಿದೆ; ಉದ್ಧವ್ ಠಾಕ್ರೆ - 1 min read

Uddhav Thackeray will continue as Shiv Sena chief: Arvind Sawant
Photo Credit :

ಮುಂಬೈ : ಭಾರತೀಯ ಜನತಾ ಪಕ್ಷದೊಂದಿಗಿನ (ಬಿಜೆಪಿ) ಮೈತ್ರಿಯಿಂದ ಶಿವಸೇನಾ 25 ವರ್ಷಗಳನ್ನು ವ್ಯರ್ಥ ಮಾಡಿದೆ ಎಂದು ನಾನು ಈಗಲೂ ನಂಬಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಶಿವಸೇನೆಯು ಸ್ವತಂತ್ರವಾಗಿ ಚುನಾವಣೆ ಎದುರಿಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲನ್ನು ಸ್ವೀಕರಿಸಿದ್ದೇನೆ. ಮಹಾರಾಷ್ಟ್ರದ ಹೊರಗೂ ಪಕ್ಷವನ್ನು ವಿಸ್ತರಿಸಿ ದೇಶ ರಾಜಕಾರಣದಲ್ಲೂ ಪ್ರಮುಖ ಪಾತ್ರ ವಹಿಸುತ್ತೇವೆ ಎಂದು ಹೇಳಿದ್ದಾರೆ.

‘ಅಧಿಕಾರದ ಮೂಲಕ ಹಿಂದುತ್ವ ಅಜೆಂಡಾವನ್ನು ಮುಂದಕ್ಕೆ ಕೊಂಡೊಯ್ಯಲು ಬಿಜೆಪಿಯೊಂದಿಗೆ ಶಿವಸೇನಾ ಮೈತ್ರಿ ಮಾಡಿಕೊಂಡಿತ್ತು. ಶಿವಸೇನಾ ವೋಟಿಗಾಗಿ ಹಿಂದುತ್ವವನ್ನು ಎಂದೂ ಬಳಕೆ ಮಾಡಿಲ್ಲ. ಇನ್ನೊಂದೆಡೆ ಬಿಜೆಪಿ ರಾಜಕೀಯ ಲಾಭಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿದೆ’ ಎಂದು ಟೀಕಿಸಿದರು.

‘ಬಿಜೆಪಿ ರಾಜಕೀಯವಾಗಿ ಬೆಳೆಯುತ್ತಿರುವಾಗ ಶಿವಸೇನಾ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆಗ ಬಿಜೆಪಿ ಹಲವು ಕಡೆಗಳಲ್ಲಿ ಠೇವಣಿ ಕಳೆದುಕೊಂಡಿತ್ತು. ಹಿಂದುತ್ವಕ್ಕಾಗಿ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನಾ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು. ಸೇನೆಯು ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಿದೆ, ಹಿಂದುತ್ವವನ್ನಲ್ಲ! ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರವಾಗಿದೆ’ ಎಂದು ಆರೋಪಿಸಿದರು.

‘ಅವಕಾಶವಾದಿ ರಾಜಕಾರಣದಿಂದಲೇ ಕಾಶ್ಮೀರದಲ್ಲಿ ಪಿಡಿಪಿ ಹಾಗೂ ಬಿಹಾರದಲ್ಲಿ ಸಂಘ ಮುಕ್ತಿಗಾಗಿ (ಆರ್‌ಎಸ್‌ಎಸ್) ಹೇಳಿಕೆ ನೀಡಿರುವ ನಿತೀಶ್ ಕುಮಾರ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. 2019ರಲ್ಲಿ ಸೇನೆಯು ಕಾಂಗ್ರೆಸ್ ಹಾಗೂ ಎನ್‌ಸಿಪಿ ಜೊತೆ ಸೇರಿಕೊಂಡು ‘ಮಹಾ ವಿಕಾಸ್ ಆಘಾಡಿ’ ಮೈತ್ರಿಕೂಟವನ್ನು ರಚಿಸಿದೆ. ಇನ್ನೊಂದೆಡೆ ಬಿಜೆಪಿ ಪಕ್ಷಗಳಲ್ಲಿ ಒಡಕು ಸೃಷ್ಟಿಸಿ ಚುನಾಯಿತ ಸರ್ಕಾರಗಳನ್ನು ಅಧಿಕಾರದಿಂದ ಕೆಡವಿದೆ’ ಎಂದು ವಾಗ್ದಾಳಿ ನಡೆಸಿದರು.

‘ರಾಷ್ಟ್ರೀಯ ಹಿತಾಸಕ್ತಿಯನ್ನು ಬೆಂಬಲಿಸಲು ನಾವು ಪೂರ್ಣ ಹೃದಯದಿಂದ ಬಿಜೆಪಿಯನ್ನು ಬೆಂಬಲಿಸಿದೆವು. ಅವರು ರಾಷ್ಟ್ರಮಟ್ಟದಲ್ಲಿ ಮತ್ತು ನಾವು ಮಹಾರಾಷ್ಟ್ರದಲ್ಲಿ ಮುನ್ನಡೆಸಲಿದ್ದೇವೆ ಎಂಬ ಸ್ಪಷ್ಟ ತಿಳುವಳಿಕೆಯಿತ್ತು. ಆದರೆ ಅವರು ನಮಗೆ ದ್ರೋಹ ಬಗೆದರು ಮತ್ತು ನಮ್ಮನ್ನು ನಿರ್ನಾಮ ಮಾಡುವ ಪ್ರಯತ್ನ ಮಾಡಿದರು. ಈಗ ಅವರಿಗೆ ತಿರುಗೇಟು ನೀಡಿದ್ದೇವೆ. ಬಿಜೆಪಿ ಎಂದರೆ ಹಿಂದುತ್ವವಲ್ಲ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿದ್ದೇವೆ ಎಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ’ ಎಂದು ಪುನರುಚ್ಛರಿಸಿದರು.

See also  ತಂದೆ-ತಾಯಿ ಬದುಕಿರುವಾಗ ಆಸ್ತಿಯ ಮೇಲೆ ಮಗ ಹಕ್ಕು ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು