News Kannada
Friday, September 30 2022

ಮಹಾರಾಷ್ಟ್ರ

ಭಾರತ ರತ್ನ ಲತಾ ಮಂಗೇಶ್ಕರ್ ಮತ್ತಷ್ಟು ಗಂಭೀರ; ಆಸ್ಪತ್ರೆಗೆ ಗಣ್ಯರು, ಕಲಾವಿದರು ದೌಡು - 1 min read

Photo Credit :

ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಶನಿವಾರ ತಡರಾತ್ರಿ ನಟಿ ಶ್ರದ್ಧಾ ಕಪೂರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ, ನಿರ್ಮಾಪಕ ಮಧುರ್ ಭಂಡಾರ್ಕರ್ ಮತ್ತು ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಜನವರಿ 8 ರಿಂದ ಚಿಕಿತ್ಸೆ ಪಡೆಯುತ್ತಿರುವ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಚಿತ್ರರಂಗ, ರಾಜಕೀಯ ರಂಗದ ಗಣ್ಯರು, ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬ್ರೀಚ್ ಕ್ಯಾಂಡಿ ಆಸ್ಪತ್ರೆ ಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಪಿಯುಷ್ ಗೊಯಲ್, ನಾನು ಪ್ರಧಾನಿಯವರ ಸಂದೇಶವನ್ನು ಲತಾಮಂಗೇಶ್ಕರ್ ಕುಟುಂಬಕ್ಕೆ ತಿಳಿಸಿದ್ದೇನೆ. ಅವರು ಶೀಘ್ರವೇ ಚೇತರಿಸಿಕೊಳ್ಳಲಿ, ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತ ಗಾಯನ ಲೋಕದ ಲೆಜೆಂಡ್ ಲತಾಮಂಗೇಶ್ಕರ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಶನಿವಾರ ಗಾಯಕಿ ಆಶಾ ಭೋಂಸ್ಲೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಸೋದರಿ ಲತಾ ಮಂಗೇಶ್ಕರ್ ಅವರ ಆರೋಗ್ಯ ವಿಚಾರಿಸಿದ್ದರು.

See also  ಮುಂಬೈ: ಶಿಕ್ಷಕಿಯ ಖಾಸಗಿ ವೀಡಿಯೋ ಸೆರೆಹಿಡಿದಿದ್ದ ಅಪ್ರಾಪ್ತ ವಿದ್ಯಾರ್ಥಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

One thought on “ಭಾರತ ರತ್ನ ಲತಾ ಮಂಗೇಶ್ಕರ್ ಮತ್ತಷ್ಟು ಗಂಭೀರ; ಆಸ್ಪತ್ರೆಗೆ ಗಣ್ಯರು, ಕಲಾವಿದರು ದೌಡು - 1 min read

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು