News Kannada
Monday, October 03 2022

ಮಹಾರಾಷ್ಟ್ರ

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಬಂಧಿಸಿದ ಸಿಬಿಐ - 1 min read

Photo Credit :

ಮುಂಬೈ:  ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿರುವ ಕೋರ್ಟ್‌ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್‌ನಲ್ಲಿ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ಅವರನ್ನು ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಮುಂಬೈ ಸೆಷನ್ಸ್ ಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ವೀರ್‌ ಸಿಂಗ್‌ ಅವರು ದೇಶಮುಖ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಳಿಕ, ಅವರನ್ನು ಗೃಹಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಕಳೆದ ವರ್ಷದ ನವೆಂಬರ್‌ 1ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಅವರನ್ನು ಬಂಧಿಸಿತ್ತು.

See also  22 ಬೀದಿನಾಯಿಗಳೊಂದಿಗೆ 11 ವರ್ಷದ ಮಗುವನ್ನು 2 ವರ್ಷ ಕೂಡಿಹಾಕಿದ್ದ ಪೋಷಕರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು