NewsKarnataka
Wednesday, January 19 2022

ಪಂಜಾಬ್

ವಿಧಾನಸಭಾ ಚುನಾವಣೆಯಲ್ಲಿ ಪಟಿಯಾಲದಿಂದ ಸ್ಪರ್ಧಿಸಲಿರುವ ಮಾಜಿ ಸಿಎಂ ಅಮರಿಂದರ್ ಸಿಂಗ್

ಚಂಡೀಗಢ: ಪಂಜಾಬ್ ನ ಮಾಜಿ ಸಿಎಂ ಅಮರಿಂದರ್ ಸಿಂಗ್ 2022 ರ ವಿಧಾನಸಭಾ ಚುನಾವಣೆಯಲ್ಲಿ ಪಟಿಯಾಲದಿಂದ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಫೇಸ್ ಬುಕ್ ಪೇಜ್ ನಲ್ಲಿ ಘೋಷಿಸಿರುವ ಅಮರಿಂದರ್ ಸಿಂಗ್, ನಾನು ಪಟಿಯಾಲದಲ್ಲೇ ಚುನಾವಣೆ ಎದುರಿಸುತ್ತೇನೆ ಎಂದು ಹೇಳಿದ್ದಾರೆ. ಪಟಿಯಾಲ ನಮ್ಮೊಂದಿಗೆ 400 ವರ್ಷಗಳಿಂದಲೂ ಇದೆ. ಸಿಧು ಅವರ ಕಾರಣಕ್ಕಾಗಿ ನಾನು ಅದನ್ನು ಬಿಡುವುದಿಲ್ಲ ಎಂದು ಅಮರಿಂದರ್ ಸಿಂಗ್ ತಮ್ಮ ಘೋಷಣೆಯಲ್ಲಿ ತಿಳಿಸಿದ್ದಾರೆ.

ಪಟಿಯಾಲ ಕ್ಷೇತ್ರ ಅಮರಿಂದರ್ ಸಿಂಗ್ ಅವರ ಕುಟುಂಬದ ಭದ್ರಕೋಟೆಯಾಗಿದೆ. 2022, 2007, 2012, 2017 ರಲ್ಲಿ ನಾಲ್ಕು ಬಾರಿ ಈ ಕ್ಷೇತ್ರವನ್ನು ಅಮರಿಂದರ್ ಸಿಂಗ್ ಪ್ರತಿನಿಧಿಸಿದ್ದಾರೆ. 2014 ರಲ್ಲಿ ಅಮೃತ್ ಸರ ಲೋಕಸಭಾ ಕ್ಷೇತ್ರದಿಂದ ಗೆದ್ದ ನಂತರ ಈ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು.

ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಪಟಿಯಾಲ ಕ್ಷೇತ್ರದಿಂದ ಸ್ಪರ್ಧಿಸಿ ಮೂರು ವರ್ಷಗಳ ಕಾಲ ಆ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಪಟಿಯಾಲದಿಂದ ಸ್ಪರ್ಧಿಸುವಂತೆ ನವಜೋತ್ ಸಿಂಗ್ ಸಿಧುಗೆ ಸವಾಲು ಹಾಕಿದ್ದ ಅಮರಿಂದರ್ ಸಿಂಗ್ ಒಂದು ವೇಳೆ ಸಿಧು ಆ ಕ್ಷೇತ್ರದಿಂದ ಸ್ಪರ್ಧಿಸಿದ್ದೇ ಆದಲ್ಲಿ ಅವರು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದೂ ಹೇಳಿದ್ದರು. ಸಿಧು ಹಾಗೂ ತಮ್ಮ ನಡುವಿನ ರಾಜಕೀಯ ತಿಕ್ಕಾಟದ ಕಾರಣದಿಂದಾಗಿ ಅಮರಿಂದರ್ ಸಿಂಗ್ ಪಂಜಾಬ್ ಸಿಎಂ ಸ್ಥಾನದಿಂದ ಸೆಪ್ಟೆಂಬರ್ ನಲ್ಲಿ ಕೆಳಗಿಳಿದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.