ಜೈಪುರ: ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ ಜಾವೇದ್ ಖಾನ್ (21) ಎಂಬ ವ್ಯಕ್ತಿಯೊಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
‘ಆರೋಪಿ ಜಾವೇದ್ ಖಾನ್ (21) ಟೊಂಕ್ ನಗರದ ನಜಾರ್‌ಬಾಗ್ ರಸ್ತೆಯ ನಿವಾಸಿ’ ಎಂದು ಟೊಂಕ್‌ನ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಆರೋಪಿಯ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅವರು ಹೇಳಿದ್ದಾರೆ.