News Kannada

ರಾಜಸ್ಥಾನ

ದೇಶಕ್ಕೆ ಉಪಶಮನಕಾರಿ ಸ್ಪರ್ಶದ ಅನಿವಾರ್ಯ ಇರುವಾಗ ಮೋದಿ ಮೌನ: ಸೋನಿಯಾ ಗಾಂಧಿ - 1 min read

ಉದಯಪುರ: ‘ನಮ್ಮ ಪ್ರಧಾನಿ ಬೇರೆಲ್ಲಾ ಸಮಯದಲ್ಲಿ ಬಹಳ ನಿರರ್ಗಳವಾಗಿ ಮಾತನಾಡುತ್ತಾರೆ. ಆದರೆ, ದೇಶಕ್ಕೆ ಅವರ ಉಪಶಮನಕಾರಿ ಸ್ಪರ್ಶದ ಅನಿವಾರ್ಯ ಇರುವಾಗ ಮೌನವಾಗಿದ್ದಾರೆ’ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಚಿಂತನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.

‘ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಸದಾ, ‘ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ’ ಎಂದು ಹೇಳುತ್ತಿರುತ್ತಾರೆ. ಅವರ ಪ್ರಕಾರ ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂದರೆ ದೇಶವನ್ನು ಶಾಶ್ವತವಾಗಿ ಧ್ರುವೀಕರಣ ಮಾಡುವುದು, ಅಲ್ಪಸಂಖ್ಯಾತರನ್ನು ತುಳಿಯುವುದು ಮತ್ತು ರಾಜಕೀಯ ವಿರೋಧಿಗಳನ್ನು ಬೆದರಿಸುವುದು ಎಂಬುದು ಈಗ ನಿಚ್ಚಳವಾಗಿಹೋಗಿದೆ’ ಎಂದು ಕಿಡಿಕಾರಿದ್ದಾರೆ.

See also  ರಾಜಸ್ಥಾನದ : ಜಲೋರ್ ನಲ್ಲಿ ಭೂಕಂಪ ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು