ಕನ್ನಿಮೋಳಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 562 ಅಂಕಗಳನ್ನು ಪಡೆದಿದ್ದಳು. ಇತ್ತೀಚಿಗಷ್ಟೆ ಧನುಷ್ ಎಂಬ ನೀಟ್ ಪರೀಕ್ಷೆ ಬರೆದಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಸರ್ಕಾರ ನೀಟ್ ಪರೀಕ್ಷೆ ರದ್ದು ಪಡಿಸುವ ವಿಚಾರವಾಗಿ ಕೆಲವು ಸಮಯದಿಂದ ಹೇಳಿಕೆಗಳನ್ನು ನೀಡಿತ್ತು. ನೀಟ್ ಪರೀಕ್ಷೆ ರದ್ದಾಗುವುದೆಂದು ಹಲವು ಮಂದಿ ವಿದ್ಯಾರ್ಥಿಗಳು ಚೆನ್ನಾಗಿ ತಯಾರಾಗಿರಲಿಲ್ಲ. ಸರ್ಕಾರದ ಗೊಂದಲಮಯ ಹೇಳಿಕೆಯಿಂದ ವಿದ್ಯಾರ್ಥಿಗಳು ಒತ್ತಡಕ್ಕೀಡಾಗಿದ್ದಾರೆ ಎಂದು ಪ್ರತಿ ಪಕ್ಷ ಆರೋಪಿಸಿತ್ತು.
ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ
Photo Credit :
ಚೆನ್ನೈ : ನೀಟ್ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ 19 ವರ್ಷದ ವಿದ್ಯಾರ್ಥಿನಿ ಕೆ.ಕನ್ನಿಮೋಳಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಲುರ್ ಜಿಲ್ಲೆಯ ಸತಂಪಡಿ ಗ್ರಾಮದಲ್ಲಿ ನಡೆದಿದೆ.ಆಕೆ ಇತ್ತೀಚಿಗಷ್ಟೆ ನೀಟ್ ಪ್ರವೇಶ ಪರೀಕ್ಷೆ ಬರೆದಿದ್ದಳು.
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂದು ಆಕೆ ಪೋಷಕರಲ್ಲಿ ಹೇಳಿಕೊಂಡಿದ್ದಳು. ಹಾಗಾಗಿ ತಾನು ಪರೀಕ್ಷೆ ಪಾಸಾಗುವುದಿಲ್ಲ ಎಂದು ಆಕೆ ಹೇಳಿದ್ದಳು. ಪೋಷಕರು ಆಕೆಗೆ ಸಮಾಧಾನ ಹೇಳಿದ್ದರೂ ಆಕೆ ಬೇಸರದಿಂದ ಹೊರ ಬಂದಿರಲಿಲ್ಲ. ಪೋಷಕರು ಕಾರ್ಯಕ್ರಮ ನಿಮಿತ್ತ ಪಕ್ಕದ ಊರಿಗೆ ಹೋಗಿದ್ದ ಸಮಯದಲ್ಲಿ ಕನ್ನಿಮೋಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.