News Kannada
Friday, December 02 2022

ತಮಿಳುನಾಡು

ಅಣ್ಣಾಮಲೈ ವಿರುದ್ಧ ₹ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಡಿಎಂಕೆ

Photo Credit :

ಚೆನ್ನೈ : ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್  ಅವರ ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ಪ್ರವಾಸ ಕುರಿತು ಸುಳ್ಳು ಹಾಗೂ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ವಿರುದ್ಧ ಡಿಎಂಕೆ ಪಕ್ಷವು ಶನಿವಾರ ನೋಟಿಸ್ ಜಾರಿ ಮಾಡಿದೆ.

ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ನೋಟಿಸ್ ಜಾರಿ ಮಾಡಿದ್ದು, ‘ಅಣ್ಣಾಮಲೈ ಅವರು ತಾವು ನೀಡಿರುವ ಹೇಳಿಕೆಗಳನ್ನು ವಾಪಸ್ ಪಡೆದು 24 ಗಂಟೆಗಳ ಒಳಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಮತ್ತು ಎರಡು ದಿನಗಳೊಳಗಾಗಿ ಮುಖ್ಯಮಂತ್ರಿ ಅವರ ಸಾರ್ವಜನಿಕ ಪರಿಹಾರ ನಿಧಿಗೆ ₹ 100 ಕೋಟಿ ಪಾವತಿಸುವಂತೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ದುಬೈ ಎಕ್ಸ್‌ಪೋ 2020’ರಲ್ಲಿ ಭಾಗವಹಿಸಲು ಮತ್ತು ತಮಿಳುನಾಡಿನಲ್ಲಿ ಹೂಡಿಕೆ ಮಾಡಲು ಗಲ್ಫ್ ರಾಷ್ಟ್ರದ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸುವ ಸಲುವಾಗಿ ಸ್ಟಾಲಿನ್ ಅವರು ಪ್ರಸ್ತುತ ಯುಇಎ ಪ್ರವಾಸದಲ್ಲಿದ್ದಾರೆ.

ಮಾರ್ಚ್ 24 ಮತ್ತು 25ರಂದು ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮಗಳಲ್ಲಿ ಅಣ್ಣಾಮಲೈ ಅವರು, ಸ್ಟಾಲಿನ್ ಅವರ ಯುಎಇ ಭೇಟಿಗೆ ವೈಯಕ್ತಿಕ ಉದ್ದೇಶಗಳು ಕಾರಣವೆಂದು ಆರೋಪ ಮಾಡಿದ್ದರು.

See also  ಇಂದು ಚೆನ್ನೈ, ಪಕ್ಕದ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಐಎಮ್ ಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು